ಅಸ್ಸಾಂ | ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ನಿಷೇಧ
Update: 2024-12-04 19:34 IST
ಹಿಮಂತ ಬಿಸ್ವ ಶರ್ಮ | PC : PTI
ಹೊಸದಿಲ್ಲಿ: ಹೋಟೆಲ್, ರೆಸ್ಟೋರೆಂಟ್ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಪೂರೈಕೆ ಮತ್ತು ಸೇವನೆಯನ್ನು ನಿಷೇಧಿಸಲು ಅಸ್ಸಾಂ ಸರಕಾರ ನಿರ್ಧರಿಸಿದೆ ಎಂದು ಬುಧವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮ ಪ್ರಕಟಿಸಿದರು.
ನೂತನ ನಿಯಮಗಳನ್ನು ಸೇರ್ಪಡೆ ಮಾಡಲು ಚಾಲ್ತಿಯಲ್ಲಿರುವ ಕಾನೂನಿಗೆ ತಿದ್ದುಪಡಿ ಮಾಡುವ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.
“ಹೋಟೆಲ್ ಗಳು, ರೆಸ್ಟೋರೆಂಟ್ ಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗೋಮಾಂಸ ಪೂರೈಕೆ ಹಾಗೂ ಸೇವನೆಯನ್ನು ನಿಷೇಧಿಸಲು ನಾವು ನಿರ್ಧರಿಸಿದ್ದೇವೆ” ಎಂದು ಇಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶರ್ಮ ತಿಳಿಸಿದರು.