×
Ad

ಎಸ್ ಐ ಆರ್ ನಿಂದ ಹೊರಗುಳಿದ ಅಸ್ಸಾಂ: ವಿಶೇಷ ಆದೇಶವನ್ನು ಪ್ರತ್ಯೇಕವಾಗಿ ಹೊರಡಿಸಲಾಗುವುದು ಎಂದ ಸಿಇಸಿ

Update: 2025-10-27 22:28 IST

 ಗ್ಯಾನೇಶ್ ಕುಮಾರ್ | Photo Credit : PTI

ಹೊಸದಿಲ್ಲಿ: ದೇಶಾದ್ಯಂತ ನಡೆಸಲು ಉದ್ದೇಶಿಸಲಾಗಿರುವ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯಿಂದ ಅಸ್ಸಾಂ ಹೊರಗುಳಿದಿದ್ದು, ಅಸ್ಸಾಂನಲ್ಲಿ ಪೌರತ್ವ ಕಾಯ್ದೆಯ ಪ್ರತ್ಯೇಕ ನಿಯಮಗಳು ಅನ್ವಯವಾಗುವುದರಿಂದ, ಅಲ್ಲಿನ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆಯ ಕುರಿತು ವಿಶೇಷ ಆದೇಶ ಹೊರಡಿಸಲಾಗುವುದು ಎಂದು ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ನವೆಂಬರ್ 4ರಿಂದ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ನಡೆಯಲಿದೆ ಎಂದು ಪ್ರಕಟಗೊಂಡಿರುವ 12 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳ ಪೈಕಿ ಅಸ್ಸಾಂ ಸೇರಿಲ್ಲ.

ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಗ್ಯಾನೇಶ್ ಕುಮಾರ್, ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ನಡೆಯುತ್ತಿರುವ ಪೌರತ್ವ ಪರಿಶೀಲನೆ ಕಾರ್ಯ ಅಸ್ಸಾಂನಲ್ಲಿ ಇನ್ನೇನು ಮುಕ್ತಾಯಗೊಳ್ಳುವ ಹಂತದಲ್ಲಿದೆ. ಹಾಗಾಗಿ ಅಸ್ಸಾಂನಲ್ಲಿ ಪ್ರತ್ಯೇಕ ನಿಯಮಗಳಿವೆ ಎಂದು ತಿಳಿಸಿದ್ದಾರೆ.

"ಅಸ್ಸಾಂನಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ನಡೆಸಲು ವಿಶೇಷ ಆದೇಶವನ್ನು ಹೊರಡಿಸಲಾಗುವುದು" ಎಂದು ಅವರು ಹೇಳಿದ್ದಾರೆ.

ಅಸ್ಸಾಂ, ಪಶ್ಚಿಮ ಬಂಗಾಳ,ತಮಿಳುನಾಡು, ಕೇರಳ ಹಾಗೂ ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆಗಳು ಬಾಕಿ ಇವೆ. ಈ ಪೈಕಿ ನಾಲ್ಕು ರಾಜ್ಯಗಳಲ್ಲಿ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ ನಡೆಸಲಾಗುವುದು ಎಂದು ಚುನಾವಣಾ ಆಯೋಗ ಪ್ರಕಟಿಸಿದ್ದು, ಅಸ್ಸಾಂ ರಾಜ್ಯವನ್ನು ಸದ್ಯ ಈ ಪ್ರಕ್ರಿಯೆಯಿಂದ ಕೈಬಿಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News