×
Ad

ಅಸ್ಸಾಂ: ಹಿಂಸಾಚಾರಕ್ಕೆ ತಿರುಗಿದ ವಕ್ಫ್ ತಿದ್ದುಪಡಿ ಕಾಯ್ದೆ ವಿರೋಧಿ ಪ್ರತಿಭಟನೆ

Update: 2025-04-13 21:59 IST

PC : PTI 

ಗುವಾಹಟಿ: ವಕ್ಫ್ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಕಛಾರ್ ಜಿಲ್ಲೆಯಲ್ಲಿ ರವಿವಾರ ನಡೆದ ಪ್ರತಿಭಟನಾ ರ್ಯಾಲಿ ಪ್ರತಿಭಟನಕಾರರು ಹಾಗೂ ಪೊಲೀಸರ ಘರ್ಷಣೆಗೆ ಕಾರಣವಾಯಿತು.

ಇತ್ತೀಚೆಗೆ ಜಾರಿಗೊಳಿಸಲಾದ ವಕ್ಫ್ (ತಿದ್ದುಪಡಿ) ಕಾಯ್ದೆಯನ್ನು ವಿರೋಧಿಸಿ ನೂರಾರು ಜನರು ಅನುಮತಿ ಪಡೆಯದೆ ಸಿಲ್ಚಾರ್ ಪಟ್ಟಣದ ಬೆರೆಂಗಾ ಪ್ರದೇಶದಲ್ಲಿ ಬೀದಿಗಿಳಿದು ಪ್ರತಿಭಟನೆ ನಡೆಸಿದರು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.

‘‘ಸುಮಾರು 300ರಿಂದ 400 ಪ್ರತಿಭಟನಕಾರರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು. ನಾವು ರಸ್ತೆ ತಡೆಯನ್ನು ತೆರವುಗೊಳಿಸಲು ಪ್ರಯತ್ನಿಸುತ್ತಿರುವಾಗ, ಕೆಲವರು ನಮ್ಮ ಮೇಲೆ ಕಲ್ಲು ತೂರಾಟ ನಡೆಸಿದರು. ನಾವು ಗುಂಪನ್ನು ಚದುರಿಸಲು ಲಘು ಲಾಠಿ ಪ್ರಹಾರ ನಡೆಸಿದೆವು’’ ಎಂದು ಅವರು ತಿಳಿಸಿದ್ದಾರೆ.

ಪ್ರತಿಭಟನಕಾರರು ಕಪ್ಪು ಪತಾಕೆಗಳನ್ನು ಪ್ರದರ್ಶಿಸಿದರು ಹಾಗೂ ಬಿಜೆಪಿ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ಕಾಯ್ದೆಯನ್ನು ಹಿಂಪಡೆಯುವಂತೆ ಆಗ್ರಹಿಸಿದರು ಎಂದು ಅವರು ಹೇಳಿದ್ದಾರೆ.

ಈ ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಲಾಗಿದೆ. ಆದರೆ, ಯಾರೊಬ್ಬರನ್ನೂ ಬಂಧಿಸಿಲ್ಲ ಎಂದು ಅವರು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News