×
Ad

ಅಸ್ಸಾಂ: ಎನ್ಐಟಿ-ಸಿಲ್ಚಾರ್ ನ ವಿದ್ಯಾರ್ಥಿ ಆತ್ಮಹತ್ಯೆ

Update: 2023-09-16 23:45 IST

Photo: NDTV 

ಗುವಾಹತಿ: ಎನ್ಐಟಿ-ಸಿಲ್ಚಾರ್ ಕ್ಯಾಂಪಸ್ಲ್ಲಿ ಶುಕ್ರವಾರ ಮೂರನೇ ವರ್ಷದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಅರುಣಾಚಲಪ್ರದೇಶದ ನಿವಾಸಿಯಾಗಿರುವ ಈ ವಿದ್ಯಾರ್ಥಿಯ ಮೃತದೇಹ ಹಾಸ್ಟೆಲಿನ ಕೊಠಡಿಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಶುಕ್ರವಾರ ಸಂಜೆ ಪತ್ತೆಯಾಗಿದೆ. ಕಾಲೇಜಿನ ಆಡಳಿತ ಮಂಡಳಿ ತೆಗೆದುಕೊಂಡ ಕ್ರಮದಿಂದ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಆರೋಪಿಸಿ ಸಹಪಾಠಿಗಳು ಮೃತದೇಹವನ್ನು ಕೆಳಗೆ ಇಳಿಸಲು ಆರಂಭದಲ್ಲಿ ಪೊಲೀಸರಿಗೆ ಅವಕಾಶ ನೀಡಲಿಲ್ಲ ಎಂದು ವರದಿಯಾಗಿದೆ.

ಪೊಲೀಸರು ವಿದ್ಯಾರ್ಥಿಗಳನ್ನು ಸಮಾಧಾನಪಡಿಸಿ ಎರಡು ಗಂಟೆಗಳ ಬಳಿಕ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದರು. ಬಳಿಕ ಕ್ಯಾಂಪಸಿನಲ್ಲಿರುವ ಅಕಾಡೆಮಿಕ್ ಡೀನ್ ಬಿ.ಕೆ. ರಾಯ್ ಅವರ ಅಧಿಕೃತ ನಿವಾಸದ ಎದುರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಕೊರೋನಾ ಸಾಂಕ್ರಾಮಿಕ ರೋಗದ ಹಿನ್ನೆಲೆಯಲ್ಲಿ 2021ರಲ್ಲಿ ನಡೆಸಲಾದ ಮೊದಲನೇ ಸೆಮಿಸ್ಟರಿನ ಆನ್ ಲೈನ್ ಪರೀಕ್ಷೆಯಲ್ಲಿ 6 ವಿಷಯಗಳಲ್ಲಿ ಕಡಿಮೆ ಅಂಕಗಳನ್ನು ಪಡೆದ ಆತನನ್ನು ರಾಯ್ ಅವರು ಅವಮಾನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News