ವಿಧಾನಸಭಾ ಉಪಚುನಾವಣೆ | ಗುಜರಾತ್‌ನ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿಗೆ ಮುನ್ನಡೆ
Update: 2025-06-23 10:43 IST
Photo | PTI
ಅಹ್ಮದಾಬಾದ್ : ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಉಪಚುನಾವಣೆಯ ಮತ ಎಣಿಕೆ ಮುಂದುವರಿದಿದೆ. ಗುಜರಾತ್‌ನ 2 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆಯನ್ನು ಸಾಧಿಸಿದೆ.
ಗುಜರಾತ್‌ನ ವಿಸಾವದರ್ ಮತ್ತು ಕಾಡಿ ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ.
ವಿಸಾವದರ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕಿರೀಟ್ ಪಟೇಲ್ ಮುನ್ನಡೆಯನ್ನು ಸಾಧಿಸಿದ್ದಾರೆ. ಇಟಾಲಿಯಾ ಗೋಪಾಲ್ ಎರಡನೇ ಸ್ಥಾನದಲ್ಲಿದ್ದಾರೆ.
ಕಾಡಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಜೇಂದ್ರ ಚಾವ್ಡಾ ಮುನ್ನಡೆಯನ್ನು ಸಾಧಿಸಿದ್ದಾರೆ. ಕಾಂಗ್ರೆಸ್‌ನ ರಮೇಶ್ ಚಾವ್ಡಾ ಎರಡನೇ ಸ್ಥಾನದಲ್ಲಿದ್ದಾರೆ.