×
Ad

ವಿಧಾನಸಭಾ ಚುನಾವಣೆ ಹಿನ್ನೆಲೆ | ಕೇರಳ, ಅಸ್ಸಾಂ, ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳಕ್ಕೆ ಪರಿಶೀಲನಾ ಸಮಿತಿ ರಚಿಸಿದ ಕಾಂಗ್ರೆಸ್

ಪಶ್ಚಿಮ ಬಂಗಾಳ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿ ಬಿ ಕೆ ಹರಿಪ್ರಸಾದ್ ನೇಮಕ, ಅಸ್ಸಾಂಗೆ ಪ್ರಿಯಾಂಕಾ ಗಾಂಧಿ

Update: 2026-01-03 22:58 IST

ಬಿ ಕೆ ಹರಿಪ್ರಸಾದ್ ,  ಪ್ರಿಯಾಂಕಾ ಗಾಂಧಿ | Photo Credit : PTI 

ಹೊಸದಿಲ್ಲಿ: ಕೇರಳ, ಅಸ್ಸಾಂ, ತಮಿಳುನಾಡು, ಪುದುಚೇರಿ ಮತ್ತು ಪಶ್ಚಿಮ ಬಂಗಾಳದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗಳಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಕ್ಷಣದಿಂದ ಜಾರಿಗೆ ಬರುವಂತೆ ಪರಿಶೀಲನಾ ಸಮಿತಿಗಳನ್ನು ರಚಿಸಿದ್ದಾರೆ.

ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರಕಟಣೆ ಹೊರಡಿಸಿದ್ದು, ಕೇರಳ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದೆ. ಡಾ. ಸೈಯದ್ ನಸೀರ್ ಹುಸೇನ್, ನೀರಜ್ ಡಾಂಗಿ, ಅಭಿಷೇಕ್ ದತ್ ಸಮಿತಿಯ ಸದಸ್ಯರಾಗಿದ್ದಾರೆ.

ಅಸ್ಸಾಂನಲ್ಲಿ ಪ್ರಿಯಾಂಕಾ ಗಾಂಧಿ ನೇತೃತ್ವದಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಸಪ್ತಗಿರಿ ಶಂಕರ್ ಉಲಕ, ಇಮ್ರಾನ್ ಮಸೂದ್, ಡಾ. ಸಿರಿವೆಲ್ಲಾ ಪ್ರಸಾದ್ ಸಮಿತಿಯ ಸದಸ್ಯರಾಗಿರಲಿದ್ದಾರೆ.

ತಮಿಳುನಾಡು ಮತ್ತು ಪುದುಚೇರಿಗೆ ಟಿ.ಎಸ್. ಸಿಂಗ್ ದಿಯೊ ನೇತೃತ್ವದಲ್ಲಿ ಪರಿಶೀಲನಾ ಸಮಿತಿಯನ್ನು ರಚಿಸಲಾಗಿದ್ದು, ಯಶೋಮತಿ ಠಾಕೂರ್, ಜಿ.ಸಿ. ಚಂದ್ರಶೇಖರ್, ಅನಿಲ್ ಕುಮಾರ್ ಯಾದವ್ ರನ್ನು ಸದಸ್ಯರಾಗಿ ನೇಮಿಸಲಾಗಿದೆ.

ಪಶ್ಚಿಮ ಬಂಗಾಳದಲ್ಲಿ ಬಿ.ಕೆ. ಹರಿಪ್ರಸಾದ್ ನೇತೃತ್ವದಲ್ಲಿ ಪರಿಶೀಲನಾ ಸಮಿತಿ ರಚಿಸಲಾಗಿದೆ. ಸಮಿತಿಯಲ್ಲಿ ಡಾ. ಮುಹಮ್ಮದ್ ಜಾವೇದ್, ಮಮತಾ ದೇವಿ, ಬಿ.ಪಿ. ಸಿಂಗ್ ಅವರನ್ನು ಸದಸ್ಯರಾಗಿ ನೇಮಕ ಮಾಡಲಾಗಿದೆ.

ಇದಲ್ಲದೆ, ಸಮಿತಿಗೆ ಆಯಾ ರಾಜ್ಯಗಳ ಪಕ್ಷದ ಪ್ರಧಾನ ಕಾರ್ಯದರ್ಶಿಗಳು/ ಉಸ್ತುವಾರಿಗಳು, ಪ್ರದೇಶ ಕಾಂಗ್ರೆಸ್ ಅಧ್ಯಕ್ಷರು, ಸಿಎಲ್‌ಪಿ ನಾಯಕರು, ಎಐಸಿಸಿ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಆಯಾ ರಾಜ್ಯಗಳ ಪರಿಶೀಲನಾ ಸಮಿತಿಗಳ ಸದಸ್ಯರು ಪದನಿಮಿತ್ತ ಸದಸ್ಯರಾಗಿರುತ್ತಾರೆ ಎಂದು ಪ್ರಕಟನೆ ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News