ನಾಲ್ಕು ರಾಜ್ಯಗಳ ವಿಧಾನಸಭಾ ಫಲಿತಾಂಶ : ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿರುವ ಪ್ರಧಾನಿ ಮೋದಿ
Update: 2023-12-03 15:11 IST
ನರೇಂದ್ರ ಮೋದಿ | Photo: PTI
ಹೊಸದಿಲ್ಲಿ : ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಜಯಭೇರಿಯತ್ತ ಸಾಗಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರವಿವಾರ ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ದಿಲ್ಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮೋದಿ ಮಾತನಾಡುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.