×
Ad

ಸಲ್ಮಾನ್ ಖಾನ್ ಫಾರ್ಮ್ ಹೌಸ್ ಗೆ ಪ್ರವೇಶ ಯತ್ನ: ಇಬ್ಬರು ಪೊಲೀಸ್ ವಶಕ್ಕೆ

Update: 2024-01-09 10:40 IST

Photo: PTI

ಮುಂಬೈ: ಬಾಲಿವುಡ್ ತಾರೆ ಸಲ್ಮಾನ್ ಖಾನ್ ಅವರ ಫಾರ್ಮ್ ಹೌಸ್ ಪ್ರವೇಶಿಸಲು ಯತ್ನಿಸಿದ ಆರೋಪದಲ್ಲಿ ಇಬ್ಬರನ್ನು ಬಂಧಿಸಲಾಗಿದೆ. ಪಕ್ಕದ ರಾಯಗಢ ಜಿಲ್ಲೆಯ ಪನ್ವೇಲ್ ನಲ್ಲಿ ಇಬ್ಬರನ್ನು ಬಂಧಿಸಿದ ಬಳಿಕ ವಿಚಾರಣೆಗೆ ಗುರಿಪಡಿಸಿ ಬಿಡುಗಡೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ರಾಯಗಢ ಜಿಲ್ಲೆಯ ವಾಝ್ ಗ್ರಾಮದಲ್ಲಿ ಸಲ್ಮಾನ್ ಖಾನ್ ಅವರ ಫಾರ್ಮ್ಹೌಸ್ ಇದೆ. ಪಂಜಾಬ್ನ ಈ ಇಬ್ಬರು ಕೆಲ ದಿನಗಳ ಹಿಂದೆ ಮುಂಬೈಗೆ ಆಗಮಿಸಿದ್ದು, ಉತ್ತರ ಮುಂಬೈನ ಬೊರಿವಿಲಿಯಲ್ಲಿ ವಾಸವಿದ್ದರು ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಯಾರಾದರೂ ತಡೆದಲ್ಲಿ ತೋರಿಸಲು ನಕಲಿ ಆಧಾರ್ ಕಾರ್ಡ್ ಗಳನ್ನು ಸಿದ್ಧಪಡಿಸಿಕೊಂಡಿದ್ದರು. ಶಾರೂಖಾನ್, ಅಮಿತಾಬ್ ಬಚ್ಚನ್ ಮತ್ತು ಜಾನ್ ಅಬ್ರಹಾಂ ನಿವಾಸಕ್ಕೆ ತೆರಳಲೂ ಉದ್ದೇಶಿಸಿದ್ದರು ಎನ್ನಲಾಗಿದೆ. ಸಲ್ಮಾನ್ ಖಾನ್ ಅವರನ್ನು ಭೇಟಿ ಮಾಡಲು ಉತ್ಸುಕರಾಗಿದ್ದ ಇವರಿಗೆ ಕೆಲವರು ಪನ್ವೇಲ್ ಫಾರ್ಮ್ ಹೌಸ್ ಗೆ ತೆರಳಲು ಸೂಚಿಸಿದ್ದರು. ಈ ಹಿನ್ನೆಲೆಯಲ್ಲಿ ವಾಝ್ ಗ್ರಾಮಕ್ಕೆ ಆಗಮಿಸಿದ್ದರು. ಇವರು ಸಂಶಯಾಸ್ಪದವಾಗಿ ಅಡ್ಡಾಡುತ್ತಿದ್ದುದನ್ನು ಭದ್ರತಾ ಸಿಬ್ಬಂದಿ ಪತ್ತೆ ಮಾಡಿದ್ದರು. ಆ ವೇಳೆಗೆ ಇಬ್ಬರೂ ಅನುಮತಿ ಇಲ್ಲದೇ ಪ್ರವೇಶಿಸಲು ಯತ್ನಿಸಿದಾಗ ಬಂಧಿಸಲಾಯಿತು.

ಬಳಿಕ ಪನ್ವೇಲ್ ತಾಲೂಕು ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದ್ದು, ಇವರನ್ನು ಬಂಧಿಸಿ ಭಾರತೀಯ ದಂಡಸಂಹಿತೆ ಸೆಕ್ಷನ್ 448, 465, 467, 474 ಅನ್ವಯ ಅಕ್ರಮ ಪ್ರವೇಶ, ನಕಲಿ ದಾಖಲೆ ಹೊಂದಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ. ವಿಚಾರಣೆ ಬಳಿಕ ಬಿಡುಗಡೆ ಮಾಡಲಾಗಿದ್ದು, ಈ ಸಂಬಂಧ ನ್ಯಾಯಾಲಯಕ್ಕೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News