×
Ad

ಜಮ್ಮು-ಕಾಶ್ಮೀರ |ಗಡಿ ನುಸುಳಲು ಯತ್ನ ; ಭದ್ರತಾ ಪಡೆಯಿಂದ ಇಬ್ಬರ ಶಂಕಿತ ಭಯೋತ್ಪಾದಕರ ಹತ್ಯೆ

Update: 2024-07-18 20:29 IST

ಸಾಂದರ್ಭಿಕ ಚಿತ್ರ | PTI

ರಾಯಪುರ: ಜಮ್ಮು ಹಾಗೂ ಕಾಶ್ಮೀರದ ಕುಪ್ವಾರದ ಕೇರನ್ ವಲಯದ ಗಡಿನಿಯಂತ್ರಣ ರೇಖೆ (ಎಲ್ಒಸಿ)ಯಲ್ಲಿ ಒಳ ನುಸುಳಲು ಪ್ರಯತ್ನಿಸಿದ ಇಬ್ಬರು ಶಂಕಿತ ಭಯೋತ್ಪಾದಕರನ್ನು ಭದ್ರತಾ ಪಡೆ ಹತ್ಯೆಗೈದಿದೆ.

ಒಳ ನುಸುಳುವುದನ್ನು ನಿಗ್ರಹಿಸಲು ಕಾರ್ಯಾಚರಣೆ ಮುಂದುವರಿದಿದೆ. ಜಮ್ಮು ಹಾಗೂ ಕಾಶ್ಮೀರದ ದೋಡಾ ಜಿಲ್ಲೆಯ ಕಸ್ಟಿಗಡ ಪ್ರದೇಶದಲ್ಲಿ ಶಂಕಿತ ಉಗ್ರರ ವಿರುದ್ಧ ನಡೆದ ಎನ್ಕೌಂಟರ್ನಲ್ಲಿ ಭಾರತೀಯ ಸೇನೆಯ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ಅವರಿಗೆ ಮೊದಲು ದೋಡಾದಲ್ಲಿರುವ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಅನಂತರ ಸೇನಾ ಹೆಲಿಕಾಪ್ಟರ್ ಮೂಲಕ ಏರ್ ಲಿಫ್ಟ್ ಮಾಡಿ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ರಾಂಬಾನ್-ದೋಡಾ ವಲಯದ ಡಿಐಜಿ ಶ್ರೀಧರ್ ಪಾಟೀಲ್ ಎನ್ಕೌಂಟರ್ ನಡೆದ ದೋಡಾದ ಕಸ್ಟಿಗಢ ಜಿಲ್ಲೆಗೆ ಧಾವಿಸಿದ್ದಾರೆ. ‘‘ಶೋಧ ಕಾರ್ಯಾಚರಣೆ ಮುಂದುವರಿದಿದೆ. ಆದುದರಿಂದ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಿಲ್ಲ’’ ಎಂದು ಪಾಟೀಲ್ ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News