×
Ad

ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ನಿಧನ

Update: 2025-02-12 11:23 IST

ಸತ್ಯೇಂದ್ರ ದಾಸ್ (Photo: PTI)

ಲಕ್ನೊ: ಪಾರ್ಶ್ವವಾಯುವಿನಿಂದ ಬಳಲುತ್ತಿದ್ದ ಅಯೋಧ್ಯೆಯ ರಾಮ ಮಂದಿರದ ಪ್ರಧಾನ ಅರ್ಚಕ ಸತ್ಯೇಂದ್ರ ದಾಸ್ ಅವರು ಸಂಜಯ್ ಗಾಂಧಿ ವೈದ್ಯಕೀಯ ವಿಜ್ಞಾನ ಸ್ನಾತಕೋತ್ತರ ಸಂಸ್ಥೆ(SGPGI)ಯಲ್ಲಿ ಬುಧವಾರ ನಿಧನರಾಗಿದ್ದಾರೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ. ಅವರಿಗೆ 85 ವರ್ಷ ವಯಸ್ಸಾಗಿತ್ತು.

ಅಸ್ವಸ್ಥಗೊಂಡಿದ್ದ ಸತ್ಯೇಂದ್ರ ದಾಸ್ ಅವರನ್ನು ಫೆಬ್ರವರಿ 3ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಅವರು ಕೊನೆಯುಸಿರೆಳೆದಿದ್ದಾರೆ.

ಡಿಸೆಂಬರ್ 6, 1992ರಲ್ಲಿ ಬಾಬ್ರಿ ಮಸೀದಿಯನ್ನು ನೆಲಸಮಗೊಳಿಸಿದ ಸಂದರ್ಭದಲ್ಲಿ ಸತ್ಯೇಂದ್ರ ದಾಸ್ ರಾಮ ಮಂದಿರದ ತಾತ್ಕಾಲಿಕ ಅರ್ಚಕರಾಗಿದ್ದರು.

ಸತ್ಯೇಂದ್ರ ದಾಸ್ ಅವರ ನಿಧನಕ್ಕೆ ಸಂತಾಪ ವ್ಯಕ್ತಪಡಿಸಿರುವ ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ್, “ಶ್ರೀರಾಮನ ಪರಮ ಭಕ್ತ, ಅಯೋಧ್ಯೆಯ ರಾಮ ಜನ್ಮಭೂಮಿ ದೇವಸ್ಥಾನದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ಕುಮಾರ್ ದಾಸ್ ಜಿ ಮಹಾರಾಜ್ ಅವರ ನಿಧನ ತುಂಬಾ ದುಃಖಕರವಾಗಿದ್ದು, ಅವರ ನಿಧನದಿಂದ ಆಧ್ಯಾತ್ಮಿಕ ಜಗತ್ತಿಗೆ ತುಂಬಲಾರದ ನಷ್ಟವಾಗಿದೆ” ಎಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News