×
Ad

ಕಾಂಗ್ರೆಸ್‌ನ ಹಿರಿಯ ನಾಯಕ‌, ಮಾಜಿ ರಾಜ್ಯಪಾಲ ಅಝೀಝ್ ಖುರೇಷಿ ನಿಧನ

Update: 2024-03-01 15:24 IST

ಅಝೀಝ್ ಖುರೇಷಿ (Photo:X/@Khaleeqrahman)

ಭೋಪಾಲ್: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಉತ್ತರ ಪ್ರದೇಶದ ಮಾಜಿ ರಾಜ್ಯಪಾಲ ಅಝೀಝ್ ಖುರೇಷಿ (83) ಶುಕ್ರವಾರ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 10:30 ಗಂಟೆಗೆ ಭೋಪಾಲ್‌ನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

ಉತ್ತರಾಖಂಡ, ಉತ್ತರ ಪ್ರದೇಶ ಮತ್ತು ಮಿಜೋರಾಂ ರಾಜ್ಯಗಳ ರಾಜ್ಯಪಾಲರಾಗಿ ಖುರೇಷಿ ಸೇವೆ ಸಲ್ಲಿಸಿದ್ದರು.

ಅವರು ಮೊದಲ ಬಾರಿಗೆ 1972 ರಲ್ಲಿ ಮಧ್ಯಪ್ರದೇಶದ ಸೆಹೋರ್ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 1984ರಲ್ಲಿ ಲೋಕಸಭಾ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.

ಅಝೀಝ್ ಖುರೇಷಿ ನಿಧನಕ್ಕೆ ಉತ್ತರ ಪ್ರದೇಶದ ಮಾಜಿ ಸಿಎಂ ಅಖಿಲೇಶ್‌ ಯಾದವ್‌ ಸಂತಾಪ ಸೂಚಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News