ಉಪರಾಷ್ಟ್ರಪತಿ ಚುನಾವಣೆ | ಗೆಲುವಿನ ಬಗ್ಗೆ ವಿಶ್ವಾಸವಿದೆ : ಇಂಡಿಯಾ ಮೈತ್ರಿಕೂಟದ ಅಭ್ಯರ್ಥಿ ಬಿ.ಸುದರ್ಶನ ರೆಡ್ಡಿ
Update: 2025-09-09 11:56 IST
ಬಿ.ಸುದರ್ಶನ ರೆಡ್ಡಿ (Photo: PTI)
ಹೊಸದಿಲ್ಲಿ: ಗೆಲುವಿನ ಬಗ್ಗೆ ನನಗೆ ಬಹಳ ವಿಶ್ವಾಸವಿದೆ ಎಂದು ಇಂಡಿಯಾ ಮೈತ್ರಿಕೂಟದ ಉಪರಾಷ್ಟ್ರಪತಿ ಅಭ್ಯರ್ಥಿ ಮಾಜಿ ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ.
"ನನಗೆ ಗೆಲುವಿನ ಬಗ್ಗೆ ಸಂಪೂರ್ಣ ವಿಶ್ವಾಸವಿದೆ. ನಾವು ಗೆಲ್ಲುತ್ತೇವೆ. ನಾನು ಜನರನ್ನು ಜಾಗೃತಗೊಳಿಸುವ ಪ್ರಯತ್ನ ಮಾಡುತ್ತಿದ್ದೇನೆ. ಅಡ್ಡ ಮತದಾನದ ಬಗ್ಗೆ ನಾನು ಏನೂ ಹೇಳಿಲ್ಲ. ಅಡ್ಡ ಮತದಾನ ಅಂದರೆ ಏನು ಎಂಬುದೇ ನನಗೆ ಗೊತ್ತಿಲ್ಲ ಎಂದು ನ್ಯಾಯಮೂರ್ತಿ ಬಿ.ಸುದರ್ಶನ ರೆಡ್ಡಿ ಹೇಳಿದ್ದಾರೆ.
ಉಪರಾಷ್ಟ್ರಪತಿ ಚುನಾವಣೆ ಹಿನ್ನೆಲೆ ಸಂಸತ್ ಭವನದಲ್ಲಿ ಮತದಾನ ನಡೆಯುತ್ತಿದೆ. ಎನ್‌ಡಿಎ ಅಭ್ಯರ್ಥಿ ಸಿಪಿ ರಾಧಾಕೃಷ್ಣನ್ ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಬಿ ಸುದರ್ಶನ್ ರೆಡ್ಡಿ ಅವರ ಮಧ್ಯೆ ನೇರ ಸ್ಪರ್ಧೆ ನಡೆಯುತ್ತಿದೆ.