×
Ad

ಬದ್ಲಾಪುರ್ ಅತ್ಯಾಚಾರ ಪ್ರಕರಣದ ಆರೋಪಿ ಅಕ್ಷಯ್ ಶಿಂಧೆ ಪೊಲೀಸರ ಗುಂಡಿಗೆ ಬಲಿ

Update: 2024-09-23 20:31 IST

PC : freepressjournal.in

ಥಾಣೆ : ಮಹಾರಾಷ್ಟ್ರದ ಬದ್ಲಾಪುರ ಶಾಲೆಯಲ್ಲಿ ಇಬ್ಬರು ಬಾಲಕಿಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಂಧಿತ ಆರೋಪಿ ಅಕ್ಷಯ್ ಶಿಂಧೆ ಸೋಮವಾರ ಶಸ್ತ್ರಾಸ್ತ್ರ ಕಸಿದುಕೊಂಡು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾನೆ ಎಂದು ವರದಿಯಾಗಿದೆ. ಪೊಲೀಸರು ನಡೆಸಿದ ಪ್ರತಿದಾಳಿಯಲ್ಲಿ ಅಕ್ಷಯ್ ಶಿಂಧೆ ಗುಂಡು ತಗುಲಿದ್ದು, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎಂದು ANI ಸುದ್ದಿ ಸಂಸ್ಥೆ ವರದಿ ಮಾಡಿದೆ.

ಘಟನೆಯಲ್ಲಿ ಪೊಲೀಸ್ ಅಧಿಕಾರಿಗಳೂ ಗಾಯಗೊಂಡಿದ್ದಾರೆ. ಮುಂಬ್ರಾ ಬೈಪಾಸ್ ಬಳಿ ಈ ಘಟನೆ ನಡೆದಿದೆ. ಆರೋಪಿಯನ್ನು ತಲೋಜಾದಿಂದ ಬದ್ಲಾಪುರಕ್ಕೆ ಕರೆದೊಯ್ಯಲಾಗುತ್ತಿತ್ತು ಎನ್ನಲಾಗಿದೆ. ಆರೋಪಿ ಅಕ್ಷಯ್ ಶಿಂಧೆ ಬೆಂಗಾವಲು ಪೊಲೀಸರ ಮೇಲೆ ಎರಡು ಗುಂಡುಗಳನ್ನು ಹಾರಿಸಿದ್ದಾನೆ ಎಂದು ತಿಳಿದು ಬಂದಿದೆ.

ಬದ್ಲಾಪುರದಲ್ಲಿ ಇಬ್ಬರು ಶಾಲಾ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಜನರು ರೈಲ್ವೇ ನಿಲ್ದಾಣಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದರು. ಈ ಘಟನೆಯು ಮಹಾರಾಷ್ಟ್ರದಲ್ಲಿ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ವಿರೋಧ ಪಕ್ಷಗಳು ಆಡಳಿತಾರೂಢ ಮಹಾಯುತಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದವು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News