×
Ad

ಅಸದುದ್ದೀನ್ ಉವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದ ಆರೋಪಿಗಳಿಗೆ ಜಾಮೀನು ಮಂಜೂರು

Update: 2024-05-03 11:51 IST

ಅಸದುದ್ದೀನ್ ಉವೈಸಿ | PC : X \ @AsaduddinOwaisi

ಪ್ರಯಾಗ್‌ರಾಜ್: 2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಸಂಸದ ಹಾಗೂ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಕಾರಿನ ಮೇಲೆ ಗುಂಡಿನ ದಾಳಿ ನಡೆಸಿದ್ದ ಇಬ್ಬರು ಆರೋಪಿಗಳಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಆರೋಪಿಗಳಾದ ಸಚಿನ್ ಶರ್ಮ ಹಾಗೂ ಸುಭಮ್ ಗುರ್ಜರ್ ಅವರಿಗೆ ಜಾಮೀನು ಮಂಜೂರು ಮಾಡುವ ಸಂದರ್ಭದಲ್ಲಿ, ಆರೋಪಿಗಳ ಹೆಸರನ್ನು ಎಫ್‌ಐಆರ್‌ ನಲ್ಲಿ ನಮೂದಿಸಲಾಗಿಲ್ಲ ಎಂದು ನ್ಯಾ. ಪಂಕಜ್ ಭಾಟಿಯಾ ಅಭಿಪ್ರಾಯ ಪಟ್ಟಿದ್ದಾರೆ.

ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ ನಂತರ ತನಿಖಾಧಿಕಾರಿಯು ವ್ಯಕ್ತಪಡಿಸಿರುವ ಅಭಿಪ್ರಾಯದಂತೆ ಆರೋಪಿಗಳಿಗೆ ಅಪರಾಧದೊಂದಿಗೆ ನಂಟು ಕಲ್ಪಿಸಲಾಗಿದೆ ಎಂದೂ ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ.

ಅಪರಾಧ ಕೃತ್ಯದೊಂದಿಗೆ ನಂಟು ಕಲ್ಪಿಸಲಾಗಿರುವ ಅರ್ಜಿದಾರರ ವಿರುದ್ಧದ ಮೇಲ್ನೋಟದ ಸಾಕ್ಷ್ಯಾಧಾರಗಳು ದುರ್ಬಲವಾಗಿವೆ ಎಂದೂ ನ್ಯಾಯಾಲಯ ಹೇಳಿದೆ.

2022ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಹಾಪುರ್ ಜಿಲ್ಲೆಯ ಪಿಲ್ಖುವಾ ಬಳಿ ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಅವರ ಕಾರಿನ ಮೇಲೆ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News