×
Ad

ಬಾಲಸೋರ್ ತ್ರಿವಳಿ ರೈಲು ದುರಂತ: ರೈಲ್ವೆಯ 7 ಉದ್ಯೋಗಿಗಳ ಅಮಾನತು

Update: 2023-07-12 23:28 IST

Photo: PTI 

ಭುವನೇಶ್ವರ : ಒಡಿಶಾದಲ್ಲಿ ತ್ರಿವಳಿ ರೈಲುಗಳ ಅಪಘಾತ ಸಂಭವಿಸಲು ಕಾರಣವಾದ ಕರ್ತವ್ಯ ಲೋಪದ ಆರೋಪದಲ್ಲಿ ರೈಲ್ವೆಯ ಕನಿಷ್ಠ 7 ಮಂದಿ ಉದ್ಯೋಗಿಗಳನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ ಎಂದು ಉನ್ನತ ಅಧಿಕಾರಿಗಳು ತಿಳಿಸಿದ್ದಾರೆ.

ಅಧಿಕಾರಿಗಳು ಎಚ್ಚರ ವಹಿಸಿದ್ದರೆ, ಈ ಅಪಘಾತವನ್ನು ತಪ್ಪಿಸಬಹುದಾಗಿತ್ತು ಎಂದು ಆಗ್ನೇಯ ರೈಲ್ವೆಯ ಜನರಲ್ ಮ್ಯಾನೇಜರ್ ಅನಿಲ್ ಕುಮಾರ್ ಮಿಶ್ರಾ ತಿಳಿಸಿದ್ದಾರೆ. ‘‘ಸಿಬಿಐಯಿಂದ ಬಂಧಿತರಾದ ಮೂವರು ಉದ್ಯೋಗಿಗಳು ಸೇರಿದಂತೆ ಒಟ್ಟು 7 ಮಂದಿ ಉದ್ಯೋಗಿಗಳನ್ನು ಅಮಾನತುಗೊಳಿಸಲಾಗಿದೆ.

ನಿಯಮದ ಪ್ರಕಾರ 24 ಗಂಟೆಗಳ ಕಾಲ ಬಂಧನದಲ್ಲಿದ್ದರೆ, ಉದ್ಯೋಗಿಗಳನ್ನು ಅಮಾನತು ಮಾಡಲಾಗುತ್ತದೆ’’ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಸಿಬಿಐ ಹಿರಿಯ ಸೆಕ್ಷನ್ ಎಂಜಿನಿಯರ್ (ಸಿಗ್ನಲ್) ಅರುಣ್ ಕುಮಾರ್ ಮಹಾಂತ, ಸೆಕ್ಷನ್ ಎಂಜಿನಿಯರ್ ಮುಹಮ್ಮದ್ ಅಮೀರ್ ಖಾನ್ ಹಾಗೂ ಟೆಕ್ನೀಷಿಯನ್ ಪಪ್ಪು ಕುಮಾರ್ ಅವರನ್ನು ಬಂಧಿಸಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News