×
Ad

ಕೊಲ್ಕತ್ತಾಕ್ಕೆ ಆಗಮಿಸಿದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಮ್ ಅನಾರ್ ನಾಪತ್ತೆ

Update: 2024-05-21 20:43 IST

ಅನ್ವರುಲ್ ಅಝೀಮ್ ಅನಾರ್ | PC : X 

ಕೋಲ್ಕತ್ತಾ : ವೈದ್ಯಕೀಯ ಚಿಕಿತ್ಸೆ ಪಡೆಯಲು ಮೇ 12ರಂದು ಕೋಲ್ಕತ್ತಾಕ್ಕೆ ಆಗಮಿಸಿದ ಬಾಂಗ್ಲಾದೇಶದ ಸಂಸದ ಅನ್ವರುಲ್ ಅಝೀಮ್ ಅನಾರ್ ಅವರು ಕೆಲವು ದಿನಗಳಿಂದ ನಾಪತ್ತೆಯಾಗಿದ್ದಾರೆ ಎಂದು ಕೋಲ್ಕತ್ತಾದಲ್ಲಿರುವ ಬಾಂಗ್ಲಾದೇಶದ ಹೈ ಕಮಿಷನ್ಅಧಿಕಾರಿಗಳು ತಿಳಿಸಿದ್ದಾರೆ.

ಬಾಂಗ್ಲಾದೇಶದ ಆಡಳಿತಾರೂಢ ಅವಾಮಿ ಲೀಗ್ ನ ಸಂಸದರಾಗಿರುವ ಅನಾರ್ ಅವರು ಮೇ 13ರಿಂದ ನಾಪತ್ತೆಯಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಅವರು ವೈದ್ಯಕೀಯ ಚಿಕಿತ್ಸೆಗೆ ಮೇ 12ರಂದು ಕೋಲ್ಕತ್ತಾಕ್ಕೆ ಆಗಮಿಸಿದ್ದರು. ಅನಂತರ ಕೋಲ್ಕತ್ತಾದ ಬಾರಾನಗರ್ನಲ್ಲಿರುವ ಗೆಳೆಯನ ನಿವಾಸದಲ್ಲಿ ತಂಗಿದ್ದರು. ಅವರು ಮೇ 13ರಂದು ಕೆಲವರನ್ನು ಭೇಟಿಯಾಗಲು ತೆರಳಿದ್ದರು. ಆದರೆ, ಹಿಂದಿರುಗಲಿಲ್ಲ. ಅನಂತರ ಅವರ ಗೆಳೆಯ ಪೊಲೀಸರಿಗೆ ದೂರು ನೀಡಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅವರನ್ನು ಇದುವರೆಗೆ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ. ನಾವು ಪೊಲೀಸರು ಹಾಗೂ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. 

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News