×
Ad

ತಿರುಚನಾಪಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನ

Update: 2024-05-18 18:36 IST

ಏರ್ ಇಂಡಿಯಾ ಎಕ್ಸ್‌ಪ್ರೆಸ್ | PC : PTI 

ಚನ್ನೈ : ಸುಮಾರು 137 ಪ್ರಯಾಣಿಕರೊಂದಿಗೆ ಬೆಂಗಳೂರಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಿಮಾನವು ತಾಂತ್ರಿಕ ದೋಷದ ಹಿನ್ನೆಲೆಯಲ್ಲಿ ತಿರುಚನಾಪಳ್ಳಿಯಲ್ಲಿ ತುರ್ತು ಭೂಸ್ಪರ್ಶ ಮಾಡಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿವೆ ಎಂದು ಪಿಟಿಐ ಸುದ್ದಿ ಸಂಸ್ಥೆ ವರದಿ ಮಾಡಿದೆ.

ತಿರುವನಂತಪುರಂನಿಂದ ಬೆಂಗಳೂರಿಗೆ ಹೊರಟಿದ್ದ ವಿಮಾನವು ಆಗಸದಲ್ಲಿ ಹಾರಾಟ ನಡೆಸುತ್ತಿರುವಾಗಲೇ ತಾಂತ್ರಿಕ ದೋಷ ಕಂಡು ಬಂತು. ಬಳಿಕ ಅದನ್ನು ಸುರಕ್ಷಿತವಾಗಿ ತಿರುಚನಾಪಳ್ಳಿಯಲ್ಲಿ ಇಳಿಸಲಾಯಿತು ಎಂದು ಮೂಲಗಳು ತಿಳಿಸಿವೆ.

"ತಾಂತ್ರಿಕ ಸಮಸ್ಯೆಯಿಂದಾಗಿ ವಿಮಾನವನ್ನು ತಿರುಚಿರಾಪಳ್ಳಿಯಲ್ಲಿ ಇಳಿಸಲಾಯಿತು. ಪ್ರಯಾಣಿಕರನ್ನು ಬೆಂಗಳೂರಿಗೆ ಕಳುಹಿಸಲು ಬದಲಿ ವಿಮಾನ ವ್ಯವಸ್ಥೆ ಮಾಡಲಾಗುತ್ತಿದೆ" ಎಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ ವಕ್ತಾರರು ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News