×
Ad

“ಭಾರತ್ ಮಾತಾ ಕಿ ಜೈ” ಘೋಷಣೆಗೆ ಸಭಿಕರಿಂದ ನೀರಸ ಪ್ರತಿಕ್ರಿಯೆ: ತಾಳ್ಮೆ ಕಳೆದುಕೊಂಡ ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ

Update: 2024-02-03 20:55 IST

ಮೀನಾಕ್ಷಿ ಲೇಖಿ | Photo : X \ @zoo_bear

ಕೋಝಿಕ್ಕೋಡ್: ತಮ್ಮ ‘ಭಾರತ್ ಮಾತಾ ಕಿ ಜೈ’ ಘೋಷಣೆಗೆ ಸಭಿಕರಿಂದ ನೀರಸ ಪ್ರತಿಕ್ರಿಯೆ ಬಂದಿದ್ದರಿಂದ ಬಿಜೆಪಿ ನಾಯಕಿ ಮೀನಾಕ್ಷಿ ಲೇಖಿ ತಾಳ್ಮೆ ಕಳೆದುಕೊಂಡಿರುವ ಘಟನೆ ಕೋಝಿಕ್ಕೋಡ್ ಸಮಾರಂಭವೊಂದರಲ್ಲಿ ವರದಿಯಾಗಿದೆ.

ಕೇರಳದ ಕೋಝಿಕ್ಕೋಡ್ ನಲ್ಲಿ ಸಮಾರಂಭವೊಂದರಲ್ಲಿ ಭಾಗವಹಿಸಿದ್ದ ಮೀನಾಕ್ಷಿ ಲೇಖಿ, “ಭಾರತ್ ಮಾತಾ ಕಿ ಜೈ” ಎಂಬ ಘೋಷಣೆ ಕೂಗಿದಾಗ ಆ ಘೋಷಣೆಗೆ ಸಭಿಕರಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಇದರಿಂದ ತಾಳ್ಮೆ ಕಳೆದುಕೊಂಡಿರುವ ಅವರು, ಸಮಾರಂಭದಲ್ಲಿ ಭಾಗವಹಿಸಿದ್ದ ಮಹಿಳೆಯೊಬ್ಬರಿಗೆ ಮನೆಗೆ ತೆರಳುವಂತೆ ಸೂಚಿಸಿದ್ದಾರೆ.

ಮೀನಾಕ್ಷಿ ಲೇಖಿಯ ಈ ಅನುಚಿತ ವರ್ತನೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಈ ಘಟನೆಯ ವಿಡಿಯೊವನ್ನು ಹಂಚಿಕೊಂಡಿರುವ Alt News ಸಹ ಸಂಸ್ಥಾಪಕ ಮುಹಮ್ಮದ್ ಝುಬೇರ್, “ಎಂಥ ದುರಂಹಕಾರ!” ಎಂದು ಉದ್ಗರಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News