×
Ad

ಬಿಹಾರ: ಪರೀಕ್ಷೆ ಹಾಲ್‌ನಲ್ಲಿ ವಿದ್ಯಾರ್ಥಿಗಳ ನಡುವೆ ಗುಂಡಿನ ಕಾಳಗ; ಓರ್ವ ಮೃತ್ಯು

Update: 2025-02-21 21:39 IST

ಸಾಂದರ್ಭಿಕ ಚಿತ್ರ | PC : PTI

ಪಾಟ್ನಾ: ಬಿಹಾರದ ಸಸಾರಾಮ್‌ನಲ್ಲಿ ಪರೀಕ್ಷೆ ಹಾಲ್‌ನಲ್ಲಿ ವಿದ್ಯಾರ್ಥಿಗಳ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಓರ್ವ ವಿದ್ಯಾರ್ಥಿ ಗುಂಡೇಟಿನಿಂದ ಮೃತಪಟ್ಟಿದ್ದು, ಇತರ ಇಬ್ಬರು ಗಾಯಗೊಂಡಿದ್ದಾರೆ.

ಪರೀಕ್ಷೆಯಲ್ಲಿ ವಂಚನೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳ ನಡುವೆ ಘರ್ಷಣೆ ನಡೆದಿತ್ತು ಎಂದು ಸುದ್ದಿಸಂಸ್ಥೆಯು ವರದಿ ಮಾಡಿದೆ.

ವಿದ್ಯಾರ್ಥಿಗಳ ನಡುವೆ ಗುಂಡಿನ ಕಾಳಗ ನಡೆದಿತ್ತು. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆ ಪೈಕಿ ಓರ್ವ ಚಿಕಿತ್ಸೆ ಸಂದರ್ಭದಲ್ಲಿ ಮೃತಪಟ್ಟಿದ್ದಾನೆ ಎಂದು ಪೋಲಿಸ್ ಅಧಿಕಾರಿಯೋರ್ವರು ತಿಳಿಸಿದರು.

‘ಮೃತ ವಿದ್ಯಾರ್ಥಿಯ ಕುಟುಂಬ ಸದಸ್ಯರು ಮತ್ತು ಗ್ರಾಮಸ್ಥರು ಹೆದ್ದಾರಿಯಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿದ್ದರು. ಇದರಿಂದಾಗಿ ವಾಹನಗಳ ಸಂಚಾರಕ್ಕೆ ತಡೆಯುಂಟಾಗಿತ್ತು. ಆದರೆ ಆರೋಪಿಗಳ ವಿರುದ್ಧ ಕ್ರಮವನ್ನು ತೆಗೆದುಕೊಳ್ಳುವುದಾಗಿ ಭರವಸೆ ನೀಡುವ ಮೂಲಕ ಪರಿಸ್ಥಿತಿಯನ್ನು ತಣ್ಣಗಾಗಿಸಿದ್ದೇವೆ ’ ಎಂದು ಅವರು ಹೇಳಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News