×
Ad

ಬಿಹಾರದ ಕರಡು ಮತದಾರರ ಪಟ್ಟಿ ಪ್ರಕಟ

Update: 2025-08-01 20:44 IST

ಸಾಂದರ್ಭಿಕ ಚಿತ್ರ

ಪಾಟ್ನಾ,ಆ.1: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಭಾರೀ ವಿವಾದವನ್ನು ಸೃಷ್ಟಿಸಿರುವ ಮತದಾರರ ಪಟ್ಟಿಗಳ ತೀವ್ರ ಪರಿಷ್ಕರಣೆ(ಎಸ್‌ಐಆರ್)ಯು ಅಂತ್ಯಗೊಂಡಿದ್ದು,ಚುನಾವಣಾ ಆಯೋಗವು ಕರಡು ಮತದಾರರ ಪಟ್ಟಿಗಳನ್ನು ಪ್ರಕಟಿಸಿದೆ.

ಯಾವುದೇ ಸಂಕಲಿತ ಪಟ್ಟಿಯು ಲಭ್ಯವಿಲ್ಲದಿದ್ದರೂ ಮತದಾರರು ಚುನಾವಣಾ ಆಯೋಗದ ವೆಬ್‌ಸೈಟ್‌ ನಲ್ಲಿ ತಮ್ಮ ಹೆಸರುಗಳನ್ನು ಪರಿಶೀಲಿಸಬಹುದಾಗಿದೆ.

ಚುನಾವಣಾ ಆಯೋಗದ ಪ್ರಕಾರ ಜೂನ್‌ನಲ್ಲಿ ಎಸ್‌ಐಆರ್ ಆರಂಭಗೊಳ್ಳುವ ಮುನ್ನ ರಾಜ್ಯದಲ್ಲಿ 7.93 ಕೋಟಿ ನೋಂದಾಯಿತ ಮತದಾರರಿದ್ದರು. ಈಗ ಪ್ರಕಟಗೊಂಡಿರುವ ಮತದಾರರ ಪಟ್ಟಿಗಳಲ್ಲಿ ಎಷ್ಟು ಮತದಾರರಿದ್ದಾರೆ ಎನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.

ಕರಡು ಪಟ್ಟಿಯ ಪ್ರಕಟಣೆಯೊಂದಿಗೆ ‘ಹಕ್ಕುಗಳು ಮತ್ತು ಆಕ್ಷೇಪಣೆಗಳು’ ಪ್ರಕ್ರಿಯೆಯೂ ಆರಂಭಗೊಂಡಿದ್ದು ಸೆ.1ರವರೆಗೆ ಮುಂದುವರಿಯಲಿದೆ. ಈ ಅವಧಿಯಲ್ಲಿ ತಮ್ಮ ಹೆಸರುಗಳನ್ನು ತಪ್ಪಾಗಿ ಕೈಬಿಡಲಾಗಿದೆ ಎಂಬ ದೂರುಗಳನ್ನು ಹೊಂದಿರುವ ಮತದಾರರು ಪರಿಹಾರವನ್ನು ಕೋರಿ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ರಾಜ್ಯ ವಿಧಾನಸಭಾ ಚುನಾವಣೆಯು ಈ ವರ್ಷಾಂತ್ಯದಲ್ಲಿ ನಡೆಯಲಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News