×
Ad

ಬಿಹಾರ ವಿಧಾನಸಭಾ ಚುನಾವಣೆ | ಬುರ್ಖಾಧಾರಿ ಮತದಾರರನ್ನು ಗುರುತಿಸಲು ಅಂಗನವಾಡಿ ಕಾರ್ಯಕರ್ತೆಯರ ನೆರವು: ಸಿಇಸಿ

Update: 2025-10-06 22:05 IST

 Photo Credit : PTI

ಹೊಸದಿಲ್ಲಿ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬುರ್ಖಾಧಾರಿ ಮತದಾರರನ್ನು ಗುರುತಿಸಲು ಎಲ್ಲ ಮತಗಟ್ಟೆಗಳಲ್ಲೂ ಅಂಗನವಾಡಿ ಕಾರ್ಯಕರ್ತೆಯರ ನೆರವು ಪಡೆಯಲಾಗುವುದು ಎಂದು ಸೋಮವಾರ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ತಿಳಿಸಿದರು.

ಬಿಹಾರ ವಿಧಾನಸಭಾ ಚುನಾವಣಾ ವೇಳಾಪಟ್ಟಿ ಘೋಷಣೆಯ ಸುದ್ದಿ ಗೋಷ್ಠಿಯಲ್ಲಿ ಪಾಲ್ಗೊಂಡಿದ್ದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರನ್ನು ಘುಂಗಟ್ ಹಾಗೂ ಬುರ್ಖಾಧಾರಿ ಮತದಾರರ ಕುರಿತು ಪ್ರಶ್ನಿಸಿದಾಗ, ಮತಗಟ್ಟೆಯೊಳಗೆ ಗುರುತು ಪರಿಶೀಲನೆಯ ಕುರಿತು ಚುನಾವಣಾ ಆಯೋಗ ಸ್ಪಷ್ಟ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದ್ದು, ಅವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು ಎಂದು ಅವರು ಹೇಳಿದರು.

"ಬುರ್ಖಾಧಾರಿ ಮಹಿಳೆಯರ ಗುರುತನ್ನು ಪರಿಶೀಲಿಸಲು ಎಲ್ಲ ಮತಗಟ್ಟೆಗಳಲ್ಲೂ ನಮ್ಮ ಅಂಗನವಾಡಿ ಕಾರ್ಯಕರ್ತೆಯರನ್ನು ನಿಯೋಜಿಸಲಾಗುವುದು. ಮತಗಟ್ಟೆಗಳೊಳಗೆ ಗುರುತನ್ನು ಹೇಗೆ ಪರಿಶೀಲಿಸಬೇಕು ಎಂಬ ಕುರಿತು ಚುನಾವಣಾ ಆಯೋಗದ ಮಾರ್ಗಸೂಚಿ ತುಂಬಾ ಸ್ಪಷ್ಟವಾಗಿದ್ದು, ಅವನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುವುದು" ಎಂದು ಅವರು ಸ್ಪಷ್ಟಪಡಿಸಿದರು.

ಇದಕ್ಕೂ ಮುನ್ನ, ಮತಗಟ್ಟೆಗಳಿಗೆ ಬರುವ ಬುರ್ಖಾಧಾರಿ ಮಹಿಳೆಯರ ಗುರುತನ್ನು ಮತದಾರರ ಗುರುತಿನ ಚೀಟಿಯೊಂದಿಗೆ ತಾಳೆ ಮಾಡಬೇಕು ಎಂದು ಶನಿವಾರ ಬಿಹಾರ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಜೈಸ್ವಾಲ್ ಚುನಾವಣಾ ಆಯೋಗವನ್ನು ಆಗ್ರಹಿಸಿದ್ದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News