ಬಿಹಾರ ಚುನಾವಣೆ | ಕಾಂಗ್ರೆಸ್‌ನಿಂದ ಏಳು ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
Update: 2025-10-20 19:57 IST
ಸಾಂದರ್ಭಿಕ ಚಿತ್ರ | Photo Credit : PTI
ಪಾಟ್ನಾ,ಅ.20: ಕಾಂಗ್ರೆಸ್ ಬಿಹಾರ ವಿಧಾನಸಭಾ ಚುನಾವಣೆಗಾಗಿ ತನ್ನ ಇನ್ನೂ ಏಳು ಅಭ್ಯರ್ಥಿಗಳ ಪಟ್ಟಿಯನ್ನು ಸೋಮವಾರ ಬಿಡುಗಡೆಗೊಳಿಸಿದ್ದು, ಇದರೊಂದಿಗೆ ಅದರ ಘೋಷಿತ ಅಭ್ಯರ್ಥಿಗಳ ಸಂಖ್ಯೆ 61ಕ್ಕೇರಿದೆ.
ಇದು ಪಕ್ಷದ ಅಭ್ಯರ್ಥಿಗಳ ಅಂತಿಮ ಪಟ್ಟಿಯಾಗಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 70 ಸ್ಥಾನಗಳಿಗೆ ಸ್ಪರ್ಧಿಸಿತ್ತು.
ಬಿಹಾರ ವಿಧಾನಸಭಾ ಚುನಾವಣೆಯ ದ್ವಿತೀಯ ಮತ್ತು ಅಂತಿಮ ಹಂತಕ್ಕೆ ನಾಮಪತ್ರಗಳನ್ನು ಸಲ್ಲಿಸಲು ಸೋಮವಾರ ಅಂತಿಮ ದಿನವಾಗಿತ್ತು. ಆರ್‌ಜೆಡಿ ಮತ್ತು ಕಾಂಗ್ರೆಸ್ ನಡುವಿನ ಕಚ್ಚಾಟದಿಂದಾಗಿ ಮಹಾಘಟಬಂಧನ್‌ನಲ್ಲಿ ಈವರೆಗೂ ಸ್ಥಾನ ಹಂಚಿಕೆ ಒಪ್ಪಂದ ಅಂತಿಮಗೊಂಡಿಲ್ಲ.