×
Ad

ಬಿಹಾರ ಚುನಾವಣೆಗೆ ಮುನ್ನ ಮುಂಗೇರ್‌ನಲ್ಲಿ ಜನ ಸುರಾಜ್ ಅಭ್ಯರ್ಥಿ ಬಿಜೆಪಿ ಸೇರ್ಪಡೆ

Update: 2025-11-05 23:27 IST

ಪಾಟ್ನಾ (ಪಿಟಿಐ): ಬಿಹಾರದಲ್ಲಿ ಮೊದಲ ಹಂತದ ವಿಧಾನಸಭಾ ಚುನಾವಣೆಗೆ ಕೇವಲ ಒಂದು ದಿನ ಬಾಕಿ ಇರುವಾಗ, ಮುಂಗೇರ್ ಕ್ಷೇತ್ರದ ಜನ ಸುರಾಜ್ ಪಕ್ಷದ ಅಭ್ಯರ್ಥಿ ಸಂಜಯ್ ಸಿಂಗ್ ಬುಧವಾರ ಬಿಜೆಪಿ ಸೇರ್ಪಡೆಗೊಂಡಿದ್ದಾರೆ.

ಬಿಹಾರ ರಾಜ್ಯ ಬಿಜೆಪಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಂಜಯ್ ಸಿಂಗ್ ಪಕ್ಷಕ್ಕೆ ಸೇರ್ಪಡೆಗೊಂಡರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನೇತೃತ್ವದಲ್ಲಿ ಬಿಹಾರವು ಅಭಿವೃದ್ಧಿಯ ದಾರಿಯಲ್ಲಿ ವೇಗವಾಗಿ ಸಾಗುತ್ತಿದೆ. ಎನ್‌ಡಿಎ ಆಡಳಿತದಲ್ಲಿ ರಾಜ್ಯ ಇನ್ನಷ್ಟು ಪ್ರಗತಿ ಸಾಧಿಸಲಿದೆ ಎಂಬ ವಿಶ್ವಾಸ ನನ್ನಲ್ಲಿದೆ,” ಎಂದು ಹೇಳಿದರು.

ಎನ್‌ಡಿಎ ಮೈತ್ರಿ ಮುಂಬರುವ ಚುನಾವಣೆಯಲ್ಲಿ ಭಾರೀ ಅಂತರದಿಂದ ಗೆಲುವು ಸಾಧಿಸಲಿದೆ ಎಂಬ ವಿಶ್ವಾಸವನ್ನು ಸಿಂಗ್ ವ್ಯಕ್ತಪಡಿಸಿದರು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News