×
Ad

ಬಿಹಾರ | ರೀಲ್ಸ್‌ ಮಾಡಲು ಚಲಿಸುತ್ತಿದ್ದ ರೈಲಿನಲ್ಲಿದ್ದ ಪ್ರಯಾಣಿಕರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳ ಬಂಧನ

Update: 2025-07-31 21:25 IST

PC : @RPF_INDIA

ಪಟ್ನಾ: ರೀಲ್ಸ್‌ ಮಾಡಲು ಚಲಿಸುತ್ತಿದ್ದ ರೈಲಿನಲ್ಲಿದ್ದ ಪ್ರಯಾಣಿಕರ ಮೇಲೆ ಇಬ್ಬರು ಯುವಕರು ದೊಣ್ಣೆಯಿಂದ ಹಲ್ಲೆ ನಡೆಸಿದ ಆಘಾತಕಾರಿ ಘಟನೆ ಬಿಹಾರದಿಂದ ವರದಿಯಾಗಿದೆ. ವೈರಲ್ ಆಗಿರುವ ಈ ಘಟನೆಯ ವಿಡಿಯೊದಲ್ಲಿ ಬಿಹಾರದ ಭೋಜ್ ಪುರ್ ಜಿಲ್ಲೆಯಲ್ಲಿನ ನಗ್ರಿ ಹಾಲ್ಟ್ ಬಳಿ ಇಬ್ಬರು ಯುವಕರು ರೈಲಿನಲ್ಲಿದ್ದ ಪ್ರಯಾಣಿಕರ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸುತ್ತಿರುವುದು ಸೆರೆಯಾಗಿದೆ.

ಸಾಮಾಜಿಕ ಮಾಧ್ಯಮಕ್ಕಾಗಿ ರೀಲ್ಸ್‌ ಮಾಡಲು ಈ ಹಲ್ಲೆಯನ್ನು ನಡೆಸಲಾಗಿದೆ ಎಂದು ರೈಲ್ವೆ ಭದ್ರತಾ ಪಡೆ(RPF) ತಿಳಿಸಿದೆ. ಈ ಸಂಬಂಧ ಗುರುತು ಬಹಿರಂಗಪಡಿಸದ ಇಬ್ಬರು ಯುವಕರನ್ನು ರೈಲ್ವೆ ಪೊಲೀಸರು ಬಂಧಿಸಿದ್ದು, ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಂತಹ ಕೃತ್ಯಗಳ ವಿರುದ್ಧ ಎಚ್ಚರಿಕೆ ನೀಡಿರುವ ರೈಲ್ವೆ ಭದ್ರತಾ ಪಡೆ, ಇತರರನ್ನು ಅಪಾಯಕ್ಕೆ ಸಿಲುಕಿಸುವ ಇಂತಹ ಸಾಹಸಗಳನ್ನು ಮಾಡಬಾರದು ಎಂದು ಸೂಚಿಸಿದೆ.

ಇಂತಹ ಕೃತ್ಯಗಳಲ್ಲಿ ತೊಡಗಿಕೊಂಡಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚಲು ಸಕ್ರಿಯವಾಗಿ ಕಾರ್ಯಾಚರಿಸಲಾಗುತ್ತಿದೆ. ಭವಿಷ್ಯದಲ್ಲಿ ಇಂತಹ ಬೇಜವಾಬ್ದಾರಿ ಕೃತ್ಯಗಳನ್ನು ತಡೆಯಲು ಪೊಲೀಸರು ವಿಸ್ತೃತ ತನಿಖೆಯನ್ನೂ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News