×
Ad

ಬಿಹಾರ ವಿಧಾನಸಭಾ ಚುನಾವಣೆ | ಆರ್‌ಜೆಡಿಯ ಸೀಟು ಹಂಚಿಕೆ ಪ್ರಸ್ತಾಪ ತಿರಸ್ಕರಿಸಿದ ಸಿಪಿಐ

ವಿಪಕ್ಷಗಳ ಮೈತ್ರಿಕೂಟದಲ್ಲಿ ಬಿರುಕು?

Update: 2025-10-07 13:52 IST

Photo credit: PTI

ಹೊಸದಿಲ್ಲಿ : ಬಿಹಾರ ವಿಧಾನ ಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ವಿಪಕ್ಷಗಳ ಮೈತ್ರಿಕೂಟದಲ್ಲಿ ಬಿರುಕು ಮೂಡಿದೆ. ಸಿಪಿಐ(ಎಂಎಲ್) ಪಕ್ಷವು ಆರ್‌ಜೆಡಿಯ ಸೀಟು ಹಂಚಿಕೆ ಪ್ರಸ್ತಾಪವನ್ನು ತಿರಸ್ಕರಿಸಿದೆ ಎಂದು ವರದಿಯಾಗಿದೆ.

ಬಿಹಾರ ವಿಧಾನಸಭಾ ಚುನಾವಣೆಗಳಿಗೆ ರಾಷ್ಟ್ರೀಯ ಜನತಾ ದಳ(ಆರ್‌ಜೆಡಿ) ನೀಡಿದ 19 ಸ್ಥಾನಗಳ ಪ್ರಸ್ತಾಪವನ್ನು ಸಿಪಿಐ(ಎಂಎಲ್) ತಿರಸ್ಕರಿಸಿದೆ. ಸೀಟು ಹಂಚಿಕೆಗೆ ಸಂಬಂಧಿಸಿದಂತೆ ಆರ್‌ಜೆಡಿ ನಾಯಕತ್ವದ ವಿರುದ್ಧ ಸಿಪಿಐ(ಎಂಎಲ್) ಅಸಮಾಧಾನ ವ್ಯಕ್ತಪಡಿಸಿದೆ ಎಂದು ಮೂಲಗಳು ತಿಳಿಸಿವೆ.

2020ರಲ್ಲಿ ಸಿಪಿಐ(ಎಂಎಲ್) ಸ್ಪರ್ಧಿಸಿದ 19 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಗೆದ್ದಿತ್ತು. ಈ ಬಾರಿ ಹೆಚ್ಚಿನ ಸ್ಥಾನಗಳನ್ನು ನಿರೀಕ್ಷಿಸುತ್ತಿದೆ. ಹಾಗೆಯೇ ಮೈತ್ರಿಯು ಸೀಟು ಹಂಚಿಕೆಗೆ ಸಂಬಂಧಿಸಿ ಆರ್‌ಜೆಡಿ ತೆಗೆದುಕೊಳ್ಳುವ ನಿರ್ಧಾರವನ್ನು ಅವಲಂಬಿಸಿರುತ್ತದೆ ಎಂದು ಸಿಪಿಐ (ಎಂಎಲ್) ಮೂಲಗಳು ತಿಳಿಸಿವೆ.

ಸಿಪಿಐ(ಎಂಎಲ್) ಈ ಬಾರಿ 30 ಸ್ಥಾನಗಳಿಗೆ ಬೇಡಿಕೆ ಇಟ್ಟಿದೆ ಎಂದು ತಿಳಿದು ಬಂದಿದೆ. ಪಕ್ಷದ ಘನತೆಯ ಬಗ್ಗೆ ರಾಜಿ ಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಸಿಪಿಐ(ಎಂಎಲ್) ನಾಯಕರೊಬ್ಬರು ಹೇಳಿರುವ ಬಗ್ಗೆ ವರದಿಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News