ಉಪಚುನಾವಣೆ | ಮಿಲ್ಕಿಪುರ್ ಕ್ಷೇತ್ರದಲ್ಲಿ ಬಿಜೆಪಿಗೆ ಗೆಲುವು
Update: 2025-02-08 16:34 IST
ಚಂದ್ರಭಾನು ಪಾಸ್ವಾನ್ ,
ಲಕ್ನೋ: ಮಿಲ್ಕಿಪುರ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಚಂದ್ರಭಾನು ಪಾಸ್ವಾನ್ ಅವರು ತಮ್ಮ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅಜಿತ್ ಪ್ರಸಾದ್ ವಿರುದ್ಧ ಜಯ ಗಳಿಸಿದ್ದಾರೆ.
ಬಿಜೆಪಿಯ ಚಂದ್ರಭಾನು ಪಾಸ್ವಾನ್ 87,935 ಮತಗಳು ಲಭಿಸಿದ್ದು, ಸಮಾಜವಾದಿ ಪಕ್ಷದ ಅಜಿತ್ ಪ್ರಸಾದ್ 45,864 ಮತ ಬಿದ್ದಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಅಯೋಧ್ಯೆಯ ಫೈಝಾಬಾದ್ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯ ವಿರುದ್ಧ ಇಂಡಿಯಾ ಒಕ್ಕೂಟದ ಸಮಾಜವಾದಿ ಪಕ್ಷದ ಅವಧೇಶ್ ಪ್ರಸಾದ್ ಜಯಗಳಿಸಿದ್ದರು. ಅದಕ್ಕೂ ಮುಂಚೆ ಅವರು ಮಿಲ್ಕಿಪುರ್ ಕ್ಷೇತ್ರದ ಶಾಸಕರಾಗಿದ್ದರು.
ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರಕ್ಕೆ ಉಪಚುನಾವಣೆ ಘೋಷಣೆಯಾಗಿತ್ತು. ಮಿಲ್ಕಿಪುರ ಕ್ಷೇತ್ರವು ಅಯೋಧ್ಯೆ ಜಿಲ್ಲೆಯಲ್ಲಿರುವುದರಿಂದ ಚುನಾವಣೆಯು ಪ್ರತಿಷ್ಠೆಯ ಕಣವಾಗಿ ಪರಿಗಣಿಸಲ್ಪಟ್ಟಿತ್ತು.