ವಯನಾಡ್ ನಲ್ಲಿ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿ ಅಭ್ಯರ್ಥಿ ಕೆ.ಸುರೇಂದ್ರನ್ ವಿರುದ್ಧ 242 ಪ್ರಕರಣಗಳು !
Update: 2024-03-30 00:02 IST
Photo: ndtv
ಕೊಚ್ಚಿ: ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ರಾಹುಲ್ ಗಾಂಧಿ ವಿರುದ್ಧ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿರುವ ಕೇರಳದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಕೆ.ಸುರೇಂದ್ರನ್ ವಿರುದ್ಧ 242 ಪ್ರಕರಣಗಳಿವೆ. ಅಲ್ಲದೇ ಎರ್ನಾಕುಳಂ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್.ರಾಧಾಕೃಷ್ಣನ್ ವಿರುದ್ಧವೂ 211 ಪ್ರಕರಣಗಳು ದಾಖಲಾಗಿವೆ.
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷದ ಮುಖವಾಣಿಯಲ್ಲಿ ತಮ್ಮ ವಿರುದ್ಧದ ಪ್ರಕರಣಗಳ ಮಾಹಿತಿಯನ್ನು ಅಭ್ಯರ್ಥಿಗಳು ಪ್ರಕಟಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಕೇರಳ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಾರ್ಜ್ ಕುರಿಯನ್, “ಹೆಚ್ಚಿನ ಪ್ರಕರಣಗಳು ಶಬರಿಮಲೆ ಪ್ರತಿಭಟನೆಗಳಿಗೆ ಸಂಬಂಧಿಸಿದ್ದಾಗಿದೆ. ಹಲವು ಪ್ರಕರಣಗಳು ನ್ಯಾಯಾಲಯದಲ್ಲಿವೆ” ಎಂದು ಅವರು ಹೇಳಿದ್ದಾರೆ.