ಮುಂಬೈ ನಗರ ಪಾಲಿಕೆ ಚುನಾವಣಾ ಫಲಿತಾಂಶ | ಬಹುಮತದತ್ತ ಬಿಜೆಪಿ ನೇತೃತ್ವದ ಮೈತ್ರಿಕೂಟ
Update: 2026-01-16 15:01 IST
Photo credit: PTI
ಮುಂಬೈ: ಬೃಹನ್ ಮುಂಬೈ ನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಮೈತ್ರಿಕೂಟ ಮುನ್ನಡೆಯಲ್ಲಿ ಬಹುಮತದ ಗಡಿ ದಾಟಿದ್ದು, 115 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ. ವಿರೋಧ ಪಕ್ಷಗಳ ಠಾಕ್ರೆ ಸಹೋದರರ ನೇತೃತ್ವದ ಮೈತ್ರಿಕೂಟ ತೀವ್ರ ಪೈಪೋಟಿ ನೀಡುತ್ತಿದ್ದು, 78 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.
227 ಸ್ಥಾನಗಳ ಬೃಹತ್ ಮುಂಬೈ ನಗರ ಪಾಲಿಕೆಯ ಚುನಾವಣೆಯಲ್ಲಿ, ಬಿಜೆಪಿ 137 ಸ್ಥಾನಗಳಲ್ಲಿ ಸ್ಪರ್ಧಿಸಿದ್ದರೆ, ಮಿತ್ರ ಪಕ್ಷವಾದ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ 90 ಸ್ಥಾನಗಳಲ್ಲಿ ಸ್ಪರ್ಧಿಸಿದೆ.
ಮಹಾರಾಷ್ಟ್ರದಾದ್ಯಂತ 29 ಸ್ಥಳೀಯ ಸಂಸ್ಥೆಗಳಿಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 1014 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಅದರ ಮಿತ್ರ ಪಕ್ಷ ಶಿವಸೇನೆ (ಶಿಂದೆ ಬಣ) 290 ವಾರ್ಡ್ ಗಳಲ್ಲಿ ಮುನ್ನಡೆ ಸಾಧಿಸಿದೆ.