Delhi| ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ನಿವಾಸದಲ್ಲಿ ಅಗ್ನಿ ಅವಘಡ
Update: 2026-01-14 11:18 IST
Photo| X/@ANI
ಹೊಸದಿಲ್ಲಿ: ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರ ನಿವಾಸದಲ್ಲಿ ಬುಧವಾರ ಬೆಳಿಗ್ಗೆ ಅಗ್ನಿ ಅವಘಡ ಸಂಭವಿಸಿದೆ ಎಂದು ದಿಲ್ಲಿ ಅಗ್ನಿಶಾಮಕದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಡಿಎಫ್ಎಸ್ ಅಧಿಕಾರಿ ಪ್ರಕಾರ, ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ಕಳುಹಿಸಲಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಹೇಳಿದ್ದಾರೆ.
“ರವಿಶಂಕರ್ ಪ್ರಸಾದ್ ಅವರ ನಿವಾಸದಲ್ಲಿ ಬೆಂಕಿ ಕಾಣಿಸಿಕೊಂಡಿರುವ ಬಗ್ಗೆ ಬೆಳಿಗ್ಗೆ 8.5ರ ಸುಮಾರಿಗೆ ಕರೆ ಬಂದಿದೆ. ಮನೆಯ ಒಂದು ಕೊಠಡಿಯಲ್ಲಿ ಇರಿಸಲಾಗಿದ್ದ ಕೆಲವು ಪೀಠೋಪಕರಣಗಳಿಗೆ ಹಾನಿಯಾಗಿದೆ. ಬೆಂಕಿಯನ್ನು ನಿಯಂತ್ರಣಕ್ಕೆ ತರಲಾಗಿದ್ದು, ವಿಧಿವಿಜ್ಞಾನ ತಂಡ ಸ್ಥಳದಲ್ಲಿ ಪರಿಶೀಲನೆ ನಡೆಸಿದೆ” ಎಂದು ಡಿಎಫ್ಎಸ್ ಅಧಿಕಾರಿಯೋರ್ವರು ತಿಳಿಸಿದ್ದಾರೆ.