ಉಪ ರಾಷ್ಟ್ರಪತಿ ಚುನಾವಣೆ: ನಾಳೆ ಬಿಜೆಪಿ ಸಂಸದೀಯ ಮಂಡಳಿ ಸಭೆ ಸಾಧ್ಯತೆ
Update: 2025-08-16 12:24 IST
ಸಾಂದರ್ಭಿಕ ಚಿತ್ರ (Photo credit: PTI)
ಹೊಸದಿಲ್ಲಿ: ಉಪ ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಅಂತಿಮಗೊಳಿಸುವ ಸಂಬಂಧ ರವಿವಾರ ಬಿಜೆಪಿ ಸಂಸದೀಯ ಮಂಡಳಿ ಸಭೆ ಸೇರುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಈ ಸಭೆಯಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಮೈತ್ರಿಕೂಟದ ಪಕ್ಷಗಳ ಆಡಳಿತವಿರುವ ರಾಜ್ಯಗಳ ಮುಖ್ಯಮಂತ್ರಿಗಳು ಭಾಗವಹಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ಜಗದೀಪ್ ಧನಕರ್ ಅವರ ರಾಜೀನಾಮೆಯಿಂದ ಉಪ ರಾಷ್ಟ್ರಪತಿ ಸ್ಥಾನ ತೆರವಾಗಿದ್ದು, ಸೆಪ್ಟೆಂಬರ್ 9ರಂದು ಚುನಾವಣೆ ನಿಗದಿಯಾಗಿದೆ. ಆಗಸ್ಟ್ 18ರಂದು ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಪ್ರಾರಂಭಗೊಳ್ಳಲಿದೆ.
ಎನ್‌ಡಿಎ ಮೈತ್ರಿಕೂಟದ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಅಧಿಕಾರವನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾರಿಗೆ ನೀಡಲಾಗಿದೆ.