×
Ad

ಬಿಹಾರ ವಿಧಾನಸಭಾ ಚುನಾವಣೆ : 71 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Update: 2025-10-14 17:37 IST

Photo credit: PTI

ಪಾಟ್ನಾ : ಬಿಹಾರ ವಿಧಾನಸಭಾ ಚುನಾವಣೆಗೆ ಬಿಜೆಪಿ ಮಂಗಳವಾರ 71 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ಬಿಹಾರ ವಿಧಾನಸಭೆಯ ಸ್ಪೀಕರ್, ಪಾಟ್ನಾ ಸಾಹಿಬ್‌ನಿಂದ 7 ಬಾರಿ ಶಾಸಕರಾಗಿರುವ ನಂದ ಕಿಶೋರ್ ಯಾದವ್ ಸೇರಿದಂತೆ ಮೂವರು ಹಾಲಿ ಶಾಸಕರಿಗೆ ಈ ಬಾರಿ ಬಿಜೆಪಿ ಟಿಕೆಟ್ ನಿರಾಕರಿಸಿದೆ. 15 ಸ್ಥಾನಗಳಿಗೆ ಹೊಸ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

ಬಿಹಾರ ವಿಧಾನ ಪರಿಷತ್ ಸದಸ್ಯರಾಗಿರುವ ಡಿಸಿಎಂ ಸಾಮ್ರಾಟ್ ಚೌಧರಿ ತಾರಾಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಮತ್ತೋರ್ವ ಡಿಸಿಎಂ ವಿಜಯ್ ಕುಮಾರ್ ಸಿನ್ಹಾ ಅವರು ಲಖಿಸರಾಯ್ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

30 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು ಎಂದು ಪಕ್ಷದ ಮೂಲಗಳು ತಿಳಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News