ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ: ಅಭ್ಯರ್ಥಿಗಳ ಪ್ರಥಮ ಪಟ್ಟಿಯನ್ನು ಪ್ರಕಟಿಸಿದ ಬಿಜೆಪಿ
Update: 2024-08-26 13:37 IST
ಸಾಂದರ್ಭಿಕ ಚಿತ್ರ (Photo: PTI)
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಚುನಾವಣೆಗಾಗಿ ಸೋಮವಾರ ಬಿಜೆಪಿ ತನ್ನ ಪ್ರಥಮ ಪಟ್ಟಿಯನ್ನು ಪ್ರಕಟಿಸಿದೆ.
ಶೋಪಿಯಾನ್ ನಿಂದ ಜಾವೇದ್ ಅಮದ್ ಖಾದ್ರಿಯನ್ನು ಕಣಕ್ಕಿಳಿಸಲಾಗಿದೆ. ಮುಹಮ್ಮದ್ ರಫೀಕ್ ವಾನಿ ಅನಂತನಾಗ್ ಪಶ್ಚಿಮ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ದೋಡಾದಿಂದ ಗಜಯ್ ಸಿಂಗ್ ರಾಣಾ ಉಮೇದುವಾರರಾಗಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಗೆ ಮೂರು ಹಂತದಲ್ಲಿ ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 18ರಂದು ಪ್ರಾರಂಭಗೊಂಡು ಅಕ್ಟೋಬರ್ 1ಕ್ಕೆ ಅಂತ್ಯಗೊಳ್ಳಲಿದೆ.
ಆಕ್ಟೋಬರ್ 4ರಂದು ಚುನಾವಣಾ ಫಲಿತಾಂಶ ಪ್ರಕಟಗೊಳ್ಳಲಿದೆ.