×
Ad

ಹರ್ಯಾಣ ಚುನಾವಣಾ ಫಲಿತಾಂಶ | ಹಾವು-ಏಣಿ ಆಟದಲ್ಲಿ ಕಾಂಗ್ರೆಸ್ ಅನ್ನು ಹಿಂದಿಕ್ಕಿದ ಬಿಜೆಪಿ

Update: 2024-10-08 10:49 IST

ಸಾಂದರ್ಭಿಕ ಚಿತ್ರ (PTI)

ಚಂಡೀಗಢ: ಆರಂಭಿಕ ಮುನ್ನಡೆಯಲ್ಲಿ ಜಯದ ಗಡಿಯತ್ತ ಸುಲಭವಾಗಿ ಹೆಜ್ಜೆ ಹಾಕುತ್ತಿದ್ದ ಕಾಂಗ್ರೆಸ್, ಇತ್ತೀಚಿನ ವರದಿಗಳ ಪ್ರಕಾರ, ಬಿಜೆಪಿಯಿಂದ ಹಿಂದೆ ಬಿದ್ದಿದ್ದು, ಇತ್ತೀಚಿನ ಮಾಹಿತಿ ಪ್ರಕಾರ ಬಿಜೆಪಿ 46 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದರೆ, ಕಾಂಗ್ರೆಸ್ 38 ಸ್ಥಾನಗಳಲ್ಲಿ ಮಾತ್ರ ಮುನ್ನಡೆ ಸಾಧಿಸಿದೆ.

ಏಳು ಚುನಾವಣೋತ್ತರ ಸಮೀಕ್ಷೆಗಳ ಪ್ರಕಾರ, ಹರ್ಯಾಣದಲ್ಲಿ ಕಾಂಗ್ರೆಸ್ ಸರಾಸರಿ 55 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿಯಲಾಗಿತ್ತು. ಇದು ಒಟ್ಟು ಸ್ಥಾನಗಳ ಅರ್ಧಕ್ಕಿಂತ 10 ಸ್ಥಾನ ಹೆಚ್ಚಾಗಿತ್ತು. ಬಿಜೆಪಿ ಕೇವಲ 26 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಅಂದಾಜಿಸಲಾಗಿತ್ತು.

ಈ ನಡುವೆ, ಆರಂಭಿಕ ಹಿನ್ನಡೆ ಅನುಭವಿಸಿದರೂ, ಹರ್ಯಾಣದ ಮುಖ್ಯಮಂತ್ರಿ ನಯಾಬ್ ಸಿಂಗ್ ಸೈನಿ ಬಿಜೆಪಿ ಅಧಿಕಾರಕ್ಕೆ ಮರಳುವ ಕುರಿತು ಆತ್ಮ ವಿಶ್ವಾಸ ವ್ಯಕ್ತಪಡಿಸಿದ್ದರು. ಅದರಂತೆಯೇ, ಇತ್ತೀಚಿನ ಅಂಕಿ-ಅಂಶಗಳು ಬಿಜೆಪಿಯು ಕಾಂಗ್ರೆಸ್ ಪಕ್ಷವನ್ನು ಹಿಂದಿಕ್ಕಿರುವುದನ್ನು ತೋರಿಸುತ್ತಿವೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News