ಸಂಪೂರ್ಣ ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ; ಛತ್ತೀಸ್ ಗಡ ಬಿಜೆಪಿ ಅಧ್ಯಕ್ಷ ಅರುಣ್ ಸಾವೊ
Update: 2023-12-03 11:06 IST
ಅರುಣ್ ಸಾವೊ | Photo: PTI
ರಾಯ್ಪುರ : ರಾಜ್ಯದಲ್ಲಿ ಪಕ್ಷ ಸಂಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಛತ್ತೀಸ್ ಗಡ ಬಿಜೆಪಿ ಅಧ್ಯಕ್ಷ ಅರುಣ್ ಸಾವೊ ವಿಶ್ವಾಸ ವ್ಯಕ್ತಪಡಿಸಿದರು.
"ಛತ್ತೀಸ್ ಗಡದ ಜನತೆ ಬಿಜೆಪಿಗೆ ಆಶೀರ್ವಾದ ನೀಡಲಿದ್ದಾರೆ. ರಾಜ್ಯಾದ್ಯಂತ ಸುತ್ತಾಡಿ ನಾವು ಜನರ ಆಶೋತ್ತರಗಳಿಗೆ ಸ್ಪಂದಿಸಿದ್ದೇವೆ. ಅದರ ಆಧಾರದ ಮೇಲೆ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ತನ್ನ ಸರ್ಕಾರವನ್ನು ರಚಿಸಲಿದೆ" ಎಂದು ಅವರು ಹೇಳಿದರು.