×
Ad

ಲೋಕಸಭೆ ಚುನಾವಣೆ ಮುನ್ನಾ ದಿನ ಜಾರ್ಖಂಡ್ ನಲ್ಲಿ ಸ್ಫೋಟ: ನಾಲ್ವರು ಮೃತ್ಯು

Update: 2024-05-13 08:42 IST

Photo:X/latestly

ರಾಂಚಿ: ಜಾರ್ಖಂಡ್ ನ ಪಲಮು ಎಂಬಲ್ಲಿ ಭಾನುವಾರ ಸಂಜೆ ನಡೆದ ಭೀಕರ ಸ್ಫೋಟದಲ್ಲಿ ಮೂವರು ಅಪ್ರಾಪ್ತ ವಯಸ್ಸಿನವರು ಸೇರಿದಂತೆ ನಾಲ್ಕು ಮಂದಿ ಮೃತಪಟ್ಟಿದ್ದಾರೆ.

ಮಾನಾಟು ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಗುಜರಿ ವ್ಯಾಪಾರಿಯೊಬ್ಬರ ಸ್ಥಳದಲ್ಲಿ ಈ ಸ್ಫೋಟ ಸಂಭವಿಸಿದೆ ಎಂದು ಉನ್ನತ ಅಧಿಕಾರಿಗಳು ಹೇಳಿದ್ದಾರೆ.

ರಾಜ್ಯದಲ್ಲಿ ಪಲಮು ಸೇರಿದಂತೆ ಲೋಕಸಭೆಯ ನಾಲ್ಕು ಸ್ಥಾನಗಳಿಗೆ ಸೋಮವಾರ ಮತದಾನ ನಡೆಯುತ್ತಿದ್ದು, ಮತದಾನದ ಮುನ್ನಾ ದಿನ ಈ ಘಟನೆ ನಡೆದಿದೆ.

"ಈ ಘಟನೆಯಲ್ಲಿ ಮೂವರು ಮಕ್ಕಳು ಸೇರಿದಂತೆ ನಾಲ್ವರು ಮೃತಪಟ್ಟಿದ್ದಾರೆ" ಎಂದು ಪಲಮು ಎಸ್ಪಿ ರೇಷ್ಮಾ ರಮೇಶನ್ ಹೇಳಿದ್ದಾರೆ.

ಘಟನೆ ಬಗ್ಗೆ ಪ್ರತಿ ಆಯಾಮದಿಂದಲೂ ತನಿಖೆ ನಡೆಸಲಾಗುತ್ತಿದ್ದು, ಇದು ಬಾಂಬ್ ಸ್ಫೋಟವೇ ಎಂಬ ಬಗ್ಗೆಯೂ ತನಿಖೆ ನಡೆಯಲಿದೆ ಎಂದು ಅವರು ವಿವರಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News