×
Ad

ಅಯೋಧ್ಯೆ|ನಿಗೂಢ ಸ್ಫೋಟದಿಂದ ಮನೆ ಕುಸಿತ : ಐವರು ಮೃತ್ಯು, ಹಲವರಿಗೆ ಗಾಯ

Update: 2025-10-10 16:19 IST

Photo credit: jagran.com

ಅಯೋಧ್ಯೆ (ಉತ್ತರ ಪ್ರದೇಶ): ನಿಗೂಢ ಸ್ಫೋಟದಿಂದಾಗಿ ಮನೆ ಕುಸಿದ ಪರಿಣಾಮ, ಕನಿಷ್ಠ ಐವರು ಮೃತಪಟ್ಟು, ಹಲವರು ಗಾಯಗೊಂಡಿರುವ ಘಟನೆ ಗುರುವಾರ ಅಯೋಧ್ಯೆಯ ಪೂರಾ ಕಲಂದರ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಲ್ಗಾ ಭಾರಿ ಗ್ರಾಮದಲ್ಲಿ ನಡೆದಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ.

ವೃತ್ತಾಧಿಕಾರಿ ಶೈಲೇಂದ್ರ ಸಿಂಗ್ ಪ್ರಕಾರ, ರಕ್ಷಣಾ ಕಾರ್ಯಗಳು ಪ್ರಗತಿಯಲ್ಲಿದ್ದು, ಹಲವು ಮಂದಿ ಇನ್ನೂ ಕಟ್ಟಡದ ಅವಶೇಷಗಳಡಿ ಸಿಲುಕಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. “ಇಲ್ಲಿಯವರೆಗೆ ಐವರು ಮೃತಪಟ್ಟಿರುವುದು ದೃಢಪಟ್ಟಿದೆ. ಇನ್ನೂ ಕೆಲವರು ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ಪೂರ್ಣಪ್ರಮಾಣದಲ್ಲಿ ಪ್ರಗತಿಯಲ್ಲಿದ್ದು, ಸ್ಫೋಟದ ಕಾರಣವನ್ನು ಇನ್ನೂ ಪತ್ತೆ ಹಚ್ಚಬೇಕಿದೆ” ಎಂದು ಅವರು ತಿಳಿಸಿದ್ದಾರೆ.

ಘಟನೆಯ ಸುದ್ದಿ ತಿಳಿಯುತ್ತಿದ್ದಂತೆಯೇ, ಪೊಲೀಸ್ ತಂಡಗಳು, ಅಗ್ನಿಶಾಮಕ ದಳಗಳು ಹಾಗೂ ಸ್ಥಳೀಯ ಆಡಳಿತ ಅಧಿಕಾರಿಗಳು ಘಟನಾ ಸ್ಥಳಕ್ಕೆ ಧಾವಿಸಿದರು. ಕಟ್ಟಡದ ಅವಶೇಷಗಳನ್ನು ತೆರವುಗೊಳಿಸಲು ಎವಾಕ್ಯುಯೇಟರ್ ಗಳನ್ನು ಬಳಸಲಾಗುತ್ತಿದ್ದು, ಸುರಕ್ಷತಾ ಕ್ರಮದ ಭಾಗವಾಗಿ ಸಮೀಪದ ಮನೆಗಳನ್ನು ತಾತ್ಕಾಲಿಕವಾಗಿ ತೆರವುಗೊಳಿಸಲಾಗಿದೆ.

ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗದಿರಲು ಸ್ಥಳೀಯರು ಅಪಘಾತದ ಸ್ಥಳಕ್ಕೆ ಧಾವಿಸುವುದನ್ನು ನಿಲ್ಲಿಸಬೇಕು ಎಂದು ಸ್ಥಳೀಯ ಪ್ರಾಧಿಕಾರಗಳು ಮನವಿ ಮಾಡಿವೆ. ಸ್ಥಳದಲ್ಲಿರುವ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಆಡಳಿತಾತ್ಮಕ ಅಧಿಕಾರಿಗಳು ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News