×
Ad

ಜಮ್ಮುಕಾಶ್ಮೀರ | ಶ್ರೀನಗರದಲ್ಲಿ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧ ನಾಪತ್ತೆ

Update: 2025-08-01 11:33 IST

ಸಾಂದರ್ಭಿಕ ಚಿತ್ರ (PTI)

ಶ್ರೀನಗರ : ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಿಯೋಜನೆಗೊಂಡಿದ್ದ ಬಿಎಸ್ಎಫ್ ಯೋಧನೋರ್ವ ಜುಲೈ 31ರ ತಡರಾತ್ರಿ ಬೆಟಾಲಿಯನ್ ಪ್ರಧಾನ ಕಚೇರಿಯಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

ಪಂಥಚೌಕ್‌ನಲ್ಲಿರುವ 60ನೇ ಬೆಟಾಲಿಯನ್‌ನ ಸದಸ್ಯ ಸುಗಮ್ ಚೌಧರಿ ನಾಪತ್ತೆಯಾಗಿದ್ದಾರೆ. ಅವರನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ.

ಸುಗಮ್ ಚೌಧರಿ ನಾಪತ್ತೆಯಾದ ಬಗ್ಗೆ ಪ್ರಕರಣ ದಾಖಲಾಗಿದ್ದು, ಈ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಎಪ್ರಿಲ್ 22ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಜಮ್ಮುಕಾಶ್ಮೀರದ ವಿವಿಧ ಭಾಗಗಳಲ್ಲಿ ಭದ್ರತಾ ಪಡೆಗಳು ಭಯೋತ್ಪಾದಕರ ವಿರುದ್ಧ ಕಾರ್ಯಾಚರಣೆಯನ್ನು ನಡೆಸುತ್ತಿರುವ ಮಧ್ಯೆ ಈ ಘಟನೆ ನಡೆದಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News