×
Ad

ಕೇಂದ್ರ ಬಜೆಟ್ 2026 | ಬೆಂಗಳೂರು ಸೇರಿ ಪ್ರಮುಖ ನಗರಗಳನ್ನು ಬೆಸೆಯುವ ಹೈಸ್ಪೀಡ್ ರೈಲು ಕಾರಿಡಾರ್ ಘೋಷಣೆ

Update: 2026-02-01 17:29 IST

Photo credit: PTI

ಹೊಸದಿಲ್ಲಿ: ಪ್ರಮುಖ ನಗರಗಳು ಹಾಗೂ ಆರ್ಥಿಕ ಕೇಂದ್ರಗಳಲ್ಲಿ ಏಳು ಹೈಸ್ಪೀಡ್ ರೈಲು ಕಾರಿಡಾರ್ ಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.

ಪ್ರಯಾಣಿಕ ಹಾಗೂ ಪರಿಸರ ಸ್ನೇಹಿ ಸಾರಿಗೆಗೆ ಒತ್ತು ನೀಡಲು ಈ ಕಾರಿಡಾರ್ ಅನ್ನು ಘೋಷಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.

ಮುಂಬೈ-ಪುಣೆ, ಪುಣೆ-ಹೈದರಾಬಾದ್, ಹೈದರಾಬಾದ್-ಬೆಂಗಳೂರು, ಹೈದರಾಬಾದ್-ಚೆನ್ನೈ, ಚೆನ್ನೈ-ಬೆಂಗಳೂರು, ದಿಲ್ಲಿ-ವಾರಣಾಸಿ ಹಾಗೂ ವಾರಣಾಸಿ-ಸಿಲಿಗುರಿ ಪ್ರಸ್ತಾವಿತ ಹೈಸ್ಪೀಡ್ ರೈಲು ಮಾರ್ಗಗಳು. ಈ ಮಾರ್ಗಗಳು ಭಾರತದ ಹಣಕಾಸು ತಾಣ, ತಂತ್ರಜ್ಞಾನ ಕೇಂದ್ರ ಹಾಗೂ ಉತ್ಪಾದನಾ ಕ್ಲಸ್ಟರ್ ಗಳನ್ನು ಬೆಸೆಯಲಿದೆ ಎಂದು ಹೇಳಲಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News