×
Ad

Jharkhand| ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಪಲ್ಟಿ: ಕನಿಷ್ಠ 9 ಮಂದಿ ಮೃತ್ಯು, 80 ಜನರಿಗೆ ಗಾಯ

Update: 2026-01-19 10:18 IST

Photo Credit: PTI

ಗುಮ್ಲಾ: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಬಸ್ ಪಲ್ಟಿಯಾಗಿ ಐವರು ಮಹಿಳೆಯರು ಸೇರಿದಂತೆ ಕನಿಷ್ಠ 9 ಜನರು ಮೃತಪಟ್ಟಿದ್ದು, 80ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮಹುವಾದರ್ ಪೊಲೀಸ್ ಠಾಣಾ ವ್ಯಾಪ್ತಿಯ ಓರ್ಸಾ ಬಾಂಗ್ಲಾದಾರ ಕಣಿವೆಯಲ್ಲಿ ಈ ಅಪಘಾತ ಸಂಭವಿಸಿದೆ. ಬಸ್ ಚಾಲಕ ವಿಕಾಸ್ ಪಾಠಕ್ ಸೇರಿದಂತೆ 90 ಮಂದಿ ಬಸ್‌ನಲ್ಲಿದ್ದರು ಎಂದು ಹೇಳಲಾಗಿದೆ.

ಛತ್ತೀಸ್‌ಗಢದ ಬಲರಾಮ್ಪುರ ಜಿಲ್ಲೆಯಿಂದ ಲತೇಹಾರ್‌ನ ಮಹುವಾದರ್‌ಗೆ ವಿವಾಹ ಕಾರ್ಯಕ್ರಮಕ್ಕೆ ಜನರನ್ನು ಕರೆದೊಯ್ಯುತ್ತಿದ್ದ ಬಸ್‌ ಪಲ್ಟಿಯಾಗಿದ್ದು, ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರಲ್ಲಿ ನಾಲ್ವರು ಮಹಿಳೆಯರು ಸೇರಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಕುಮಾರ್ ಗೌರವ್ ತಿಳಿಸಿದ್ದಾರೆ.

ಲತೇಹಾರ್ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಸಮಯದಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು ಗುಮ್ಲಾ ಸದರ್ ಆಸ್ಪತ್ರೆಯಲ್ಲಿ ಮತ್ತಿಬ್ಬರು ಮೃತಪಟ್ಟಿದ್ದಾರೆ ಎಂದು ಮತ್ತೊಬ್ಬ ಅಧಿಕಾರಿ ತಿಳಿಸಿದ್ದಾರೆ. 

ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಮುಖ್ಯಮಂತ್ರಿ ಹೇಮಂತ್ ಸೊರೆನ್, ಗಾಯಾಳುಗಳಿಗೆ ಸೂಕ್ತ ವೈದ್ಯಕೀಯ ಚಿಕಿತ್ಸೆ ಒದಗಿಸುವಂತೆ ಲತೇಹಾರ್ ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News