×
Ad

ಯಮುನಾ ಎಕ್ಸ್‌ಪ್ರೆಸ್‌ ವೇನಲ್ಲಿ ಬಸ್‌ಗೆ ಢಿಕ್ಕಿಯಾಗಿ ಹೊತ್ತಿ ಉರಿದ ಕಾರು: ಐವರು ಸಜೀಹ ದಹನ

Update: 2024-02-12 16:50 IST

Photo: NDTV 

ಹೊಸದಿಲ್ಲಿ: ಉತ್ತರ ಪ್ರದೇಶದ ಮಥುರಾದಲ್ಲಿನ ಯಮುನಾ ಎಕ್ಸ್‌ಪ್ರೆಸ್ ವೇಯಲ್ಲಿ ಕಾರು ಮತ್ತು ಬಸ್ ನಡುವೆ ಸಂಭವಿಸಿದ ಢಿಕ್ಕಿಯಲ್ಲಿ ಐವರು ಮೃತಪಟ್ಟಿದ್ದಾರೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ ಎಂದು ndtv.com ವರದಿ ಮಾಡಿದೆ.

ಈ ಘಟನೆ ಮಥುರಾದ ಮಹಾವನ್ ಬಳಿ ಸಂಭವಿಸಿದ್ದು, ಮಾರುತಿ ಸ್ವಿಫ್ಟ್ ಕಾರು ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು, ಚಾಲಕನು ನಿಯಂತ್ರಣ ಕಳೆದುಕೊಂಡ ನಂತರ ಬಸ್‌ಗೂ ಢಿಕ್ಕಿ ಹೊಡೆದಿದೆ ಎಂದು ಹೇಳಲಾಗಿದೆ.

ಢಿಕ್ಕಿಯ ತೀವ್ರತೆಯಿಂದ ಎರಡು ವಾಹನಗಳಿಗೂ ಬೆಂಕಿ ಹೊತ್ತುಕೊಂಡಿದ್ದು, ತಕ್ಷಣವೇ ಬೆಂಕಿ ನಂದಿಸಲು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸ್ಥಳಕ್ಕೆ ಕರೆಸಲಾಯಿತು.

ಈ ಅಪಘಾತದಲ್ಲಿ ಬಸ್‌ನಲ್ಲಿದ್ದ ಪ್ರಯಾಣಿಕರು ಪಾರಾಗುವಲ್ಲಿ ಯಶಸ್ವಿಯಾಗಿದ್ದು, ಕಾರಿನಲ್ಲಿದ್ದ ಐವರೂ ಪ್ರಯಾಣಿಕರು ಸುಟ್ಟು ಕರಕಲಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಆಗ್ರಾದಿಂದ ನೊಯ್ಡಾಗೆ ಪ್ರಯಾಣಿಸುತ್ತಿದ್ದ ಬಸ್ ಅನ್ನು ಕಾರು ಹಿಂಬಾಲಿಸುವಾಗ, ಕಾರಿನ ಟೈರ್ ಸ್ಫೋಟಗೊಂಡು ಈ ಅಪಘಾತ ಸಂಭವಿಸಿದೆ ಎಂದು ಮಥುರಾದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಶೈಲೇಶ್ ಪಾಂಡೆ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News