×
Ad

ಕಿರಿಯ ವಿದ್ಯಾರ್ಥಿಗಳಿಗೆ ಅಮಾನುಷವಾಗಿ ಥಳಿಸಿದ ಪ್ರಕರಣ: ಎನ್ ಸಿಸಿ ಹಿರಿಯ ವಿದ್ಯಾರ್ಥಿ ವಿರುದ್ದ ಪ್ರಕರಣ ದಾಖಲು

Update: 2023-08-05 12:19 IST

ಥಾಣೆ: ಜೋಶಿ ಬೇಡೇಕರ್ ಕಾಲೇಜಿನ ನ್ಯಾಶನಲ್ ಕೆಡೆಟ್ ಕಾರ್ಪ್ಸ್ ನ (NCC) ಕಿರಿಯ ವಿದ್ಯಾರ್ಥಿಗಳನ್ನು ಅಮಾನುಷವಾಗಿ ಥಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ವಿದ್ಯಾರ್ಥಿಯ ವಿರುದ್ಧ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ದೈಹಿಕ ತರಬೇತಿ ನಡೆಯುತ್ತಿರುವ ವೇಳೆ 8 ಕಿರಿಯ ವಿದ್ಯಾರ್ಥಿಗಳ ಮೇಲೆ ಹಿರಿಯ ವಿದ್ಯಾರ್ಥಿ ಹಲ್ಲೆ ನಡೆಸಿದ್ದ. ವಿದ್ಯಾರ್ಥಿಗಳ ಕೈಯನ್ನು ಹಿಂದಕ್ಕೆ ಕಟ್ಟಿ, ಕೆಸರಿನಲ್ಲಿ ತಲೆ ಬಾಗಿಸಿ ಕೋಲಿನಿಂದ ಅಮಾನುಷವಾಗಿ ಹೊಡೆದಿದ್ದ. ಈ ವೀಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಶುಕ್ರವಾರ ರಾತ್ರಿ ಥಾಣೆ ನಗರ ಪೊಲೀಸ್ ಠಾಣೆಯಲ್ಲಿ ಹಿರಿಯ ವಿದ್ಯಾರ್ಥಿಯ ವಿರುದ್ಧ ಸ್ಯಯಂ ಪ್ರೇರಿತ ಪ್ರಕರಣ ದಾಖಲಾಗಿದೆ. ಐಪಿಸಿ ಸೆಕ್ಷನ್ 323 ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News