×
Ad

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಪಾಟ್ನಾದಲ್ಲಿ ಇಬ್ಬರನ್ನು ಬಂಧಿಸಿದ ಸಿಬಿಐ

Update: 2024-06-27 15:31 IST

ಸಾಂದರ್ಭಿಕ ಚಿತ್ರ 

ಹೊಸದಿಲ್ಲಿ: ಬಿಹಾರದಲ್ಲಿ ನೀಟ್-ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ ಪಾಟ್ನಾದಿಂದ ಇಬ್ಬರು ಆರೋಪಿಗಳನ್ನು ಬಂಧಿಸಿದೆ. ಬಂಧಿತರನ್ನು ಮನೀಶ್‌ ಕುಮಾರ್‌ ಮತ್ತು ಅಶುತೋಷ್‌ ಎಂದು ಗುರುತಿಸಲಾಗಿದೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ.

ಆರೋಪಿಗಳ ಪೈಕಿ ಮನೀಶ್‌ ಕುಮಾರ್‌ ವಿದ್ಯಾರ್ಥಿಗಳನ್ನು ತನ್ನ ಕಾರಿನಲ್ಲಿ ಕೂರಿಸಿ ಕರೆದೊಯ್ದಿದ್ದನೆಂದು ಹಾಗೂ ಕನಿಷ್ಠ ಎರಡು ಡಜನ್‌ ವಿದ್ಯಾರ್ಥಿಗಳಿಗೆ ಕೊಠಡಿಗಳನ್ನು ಕಾಯ್ದಿರಿಸಿದ್ದ ಎಂದು ತಿಳಿದು ಬಂದಿದೆ. ಇನ್ನೋರ್ವ ಆರೋಪಿ ಅಶುತೋಷ್‌ ವಿದ್ಯಾರ್ಥಿಗಳಿಗೆ ತನ್ನ ನಿವಾಸದಲ್ಲಿ ವಸತಿ ಸೌಕರ್ಯ ಒದಗಿಸಿದ್ದ ಎಂದು ಹೇಳಲಾಗಿದೆ.


Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News