ಎಫ್‌ಸಿಆರ್‌ಎ ಉಲ್ಲಂಘನೆ ಆರೋಪದಲ್ಲಿ ಸೋನಮ್ ವಾಂಗ್ಚುಕ್ ವಿರುದ್ಧ ಸಿಬಿಐ ತನಿಖೆ !
ಸೋನಮ್ ವಾಂಗ್ಚುಕ್ (Photo: PTI)
ಲೇಹ್ : ಲಡಾಖ್ ಮೂಲದ ಹವಾಮಾನ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಮತ್ತು ಅವರ ಸಂಸ್ಥೆಯ ವಿರುದ್ಧ ವಿದೇಶಿ ದೇಣಿಗೆ(ನಿಯಂತ್ರಣ) ಕಾಯ್ದೆಯ ಉಲ್ಲಂಘನೆಗೆ ಸಂಬಂಧಿಸಿ ಸಿಬಿಐ ಪ್ರಾಥಮಿಕ ವಿಚಾರಣೆ ನಡೆಸುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ ಎಂದು
ಸಿಬಿಐ ಸೋನಮ್ ವಾಂಗ್ಚುಕ್ ಅವರನ್ನು ವಿಚಾರಣೆಗೆ ಹಾಜರಾಗುವಂತೆ ಕರೆದಿತ್ತು ಆದರೆ ಅವರು ಇನ್ನೂ ಪ್ರತಿಕ್ರಿಯಿಸಿಲ್ಲ ಎಂದು ಹೆಸರು ಹೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸೋನಮ್ ವಾಂಗ್ಚುಕ್ ಅವರ ಎನ್‌ಜಿಒ ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಲರ್ನಿಂಗ್ (ಎಚ್ಐಎಎಲ್) ವಿರುದ್ಧ ಎಫ್‌ಸಿಆರ್‌ಎ ಉಲ್ಲಂಘನೆಯ ಆರೋಪದ ಮೇಲೆ ಸಿಬಿಐ ತನಿಖೆ ಆರಂಭಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ತನಿಖಾ ಸಂಸ್ಥೆ ಈ ಬಗ್ಗೆ ಎಫ್ಐಆರ್ ದಾಖಲಿಸಿಲ್ಲ, ಬದಲಿಗೆ ವಿಚಾರಣೆಯನ್ನು ಮಾತ್ರ ಆರಂಭಿಸಿದೆ. ಈ ಪ್ರಾಥಮಿಕ ತನಿಖೆಯನ್ನು ಎರಡು ತಿಂಗಳ ಹಿಂದೆ ಪ್ರಾರಂಭಿಸಲಾಗಿತ್ತು. ವಿಚಾರಣೆಯ ಸಮಯದಲ್ಲಿ ಸಿಬಿಐ ಪುರಾವೆಗಳನ್ನು ಕಂಡುಕೊಂಡರೆ ಪ್ರಕರಣವನ್ನು ದಾಖಲಿಸಬಹುದು. ಅಥವಾ ಪ್ರಕರಣವನ್ನು ಕೊನೆಗೊಳಿಸಬಹುದು” ಎಂದು ಅಧಿಕಾರಿಯೋರ್ವರು ತಿಳಿಸಿದ್ದಾರೆ.
ಆಗಸ್ಟ್‌ನಲ್ಲಿ ಲಡಾಖ್ ಆಡಳಿತವು ಹಿಮಾಲಯನ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ ಲರ್ನಿಂಗ್ ಗೆ ನೀಡಿದ್ದ ಭೂ ಹಂಚಿಕೆಯನ್ನು ರದ್ದುಗೊಳಿಸಿತ್ತು. ಭೂಮಿಯನ್ನು ಹಂಚಿಕೆ ಮಾಡಿದ ಉದ್ದೇಶಕ್ಕಾಗಿ ಬಳಸಿಲ್ಲ ಮತ್ತು ಯಾವುದೇ ಗುತ್ತಿಗೆ ಒಪ್ಪಂದವನ್ನು ಕಾರ್ಯರೂಪಕ್ಕೆ ತಂದಿಲ್ಲ ಎಂದು ಹೇಳಿಕೊಂಡಿತ್ತು.
ಲಡಾಖ್‌ಗೆ ರಾಜ್ಯ ಸ್ಥಾನಮಾನಕ್ಕೆ ಆಗ್ರಹಿಸಿ ಬುಧವಾರ ನಡೆದ ಪ್ರತಿಭಟನೆಯ ವೇಳೆ ಹಿಂಸಾಚಾರ ನಡೆದಿತ್ತು. ಇದರ ಬೆನ್ನಲ್ಲೇ ಸೋನಮ್ ವಾಂಗ್ಚುಕ್ ಉಪವಾಸ ಸತ್ಯಾಗ್ರಹವನ್ನು ಕೈಬಿಟ್ಟಿದ್ದರು.