×
Ad

252 ಕೋಟಿ ರೂ. ಮೌಲ್ಯದ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿಯನ್ನು ಭಾರತಕ್ಕೆ ಹಸ್ತಾಂತರಿಸಿದ ಯುಎಇ

Update: 2025-06-14 14:06 IST

ಸಾಂದರ್ಭಿಕ ಚಿತ್ರ (PTI)

ಮುಂಬೈ: 252 ಕೋಟಿ ಮೌಲ್ಯದ ಸಿಂಥೆಟಿಕ್ ಡ್ರಗ್ಸ್ ಪ್ರಕರಣದ ಪ್ರಮುಖ ಆರೋಪಿ ತಾಹಿರ್ ಸಲೀಂ ಡೋಲಾನನ್ನು ಯುಎಇ ಭಾರತಕ್ಕೆ ಗಡೀಪಾರು ಮಾಡಿದೆ.

ಮಾದಕವಸ್ತು ಕಳ್ಳಸಾಗಣೆ ವಿರುದ್ಧದ ಕಾರ್ಯಾಚರಣೆಯಲ್ಲಿ ಇದು ಮಹತ್ವದ ಬೆಳವಣಿಗೆಯಾಗಿದೆ. ಸಿಬಿಐ, ಇಂಟರ್‌ಪೋಲ್‌ ಮತ್ತು ಯುಎಇ ಅಧಿಕಾರಿಗಳ ಸಮನ್ವಯತೆಯಿಂದ ಆತನನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ.

ಸಾಂಗ್ಲಿಯಲ್ಲಿ ಅಕ್ರಮವಾಗಿ ಮೆಫೆಡ್ರೋನ್ ಉತ್ಪಾದನಾ ಘಟಕವನ್ನು ನಡೆಸುತ್ತಿದ್ದ ತಾಹಿರ್ ಸಲೀಂ ಡೋಲಾ ವಿರುದ್ಧ ಕುರ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈತ ದುಬೈನಿಂದ AI-984 ವಿಮಾನದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾನೆ ಎಂದು ಸಿಬಿಐ ಅಧಿಕಾರಿಗಳು ತಿಳಿಸಿದ್ದಾರೆ.

ಮುಂಬೈ ಪೊಲೀಸರ ಕೋರಿಕೆಯ ಮೇರೆಗೆ 2024ರ ನವೆಂಬರ್‌ನಲ್ಲಿ ಇಂಟರ್‌ಪೋಲ್‌ ಡೋಲಾ ವಿರುದ್ಧ ರೆಡ್ ಕಾರ್ನರ್ ನೋಟಿಸ್ (ಆರ್‌ಸಿಎನ್‌) ಹೊರಡಿಸಿತ್ತು. ನಂತರ ಜನವರಿಯಲ್ಲಿ ಅಬುಧಾಬಿ ಪೊಲೀಸರು ಡೋಲಾನನ್ನು ಬಂಧಿಸಿದ್ದರು.

ಡೋಲಾನನ್ನು ಭಾರತಕ್ಕೆ ಗಡೀಪಾರು ಮಾಡುವಲ್ಲಿ ಸಿಬಿಐ ಅಂತಾರಾಷ್ಟ್ರೀಯ ಪೊಲೀಸ್ ಸಹಕಾರ ಘಟಕ (ಐಪಿಸಿಯು), ಅಬುಧಾಬಿ ಎನ್‌ಸಿಬಿ ಮಹತ್ವದ ಪಾತ್ರವನ್ನು ವಹಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News