ಕರೂರ್ ಕಾಲ್ತುಳಿತ ಪ್ರಕರಣದ ಕುರಿತು ತನಿಖೆ ಆರಂಭಿಸಿದ ಸಿಬಿಐ
Update: 2025-10-26 16:33 IST
Photo credit: PTI
ಹೊಸದಿಲ್ಲಿ: ಕರೂರ್ ಕಾಲ್ತುಳಿತ ಘಟನೆ ಕುರಿತ ಸಿಬಿಐ ತನಿಖೆ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ರವಿವಾರ ತಿಳಿಸಿದ್ದಾರೆ.
ಸೆಪ್ಟೆಂಬರ್ 27 ರಂದು ನಟ ವಿಜಯ್ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 41 ಜನರು ಮೃತಪಟ್ಟಿದ್ದರು. 60ಕ್ಕೂ ಅಧಿಕ ಜನರು ಗಾಯಗೊಂಡಿದ್ದರು.
ಈ ಕುರಿತು ತನಿಖೆಗೆ ತಮಿಳುನಾಡಿನ ಕರೂರಿನ ವೇಲುಸಾಮಿಪುರಂನಲ್ಲಿರುವ ಘಟನಾ ಸ್ಥಳಕ್ಕೆ ಸಿಬಿಐ ವಿಶೇಷ ತಂಡ ಭೇಟಿ ನೀಡಿದೆ.
ಸ್ವತಂತ್ರ ತನಿಖೆಗಾಗಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಸಲ್ಲಿಸಿದ ಅರ್ಜಿಯ ಮೇರೆಗೆ ಸುಪ್ರೀಂ ಕೋರ್ಟ್ ಈ ಪ್ರಕರಣದ ತನಿಖೆಯನ್ನು ಸಿಬಿಐಗೆ ಹಸ್ತಾಂತರಿಸಿತ್ತು.