×
Ad

ದಿಲ್ಲಿ ತರಬೇತಿ ಕೇಂದ್ರದಲ್ಲಿ ಐಎಎಸ್ ಆಕಾಂಕ್ಷಿಗಳ ಮೃತ್ಯು | ತನಿಖೆ ಕೈಗೆತ್ತಿಕೊಂಡ ಸಿಬಿಐ

Update: 2024-08-07 20:37 IST

CBI

ಹೊಸದಿಲ್ಲಿ : ದಿಲ್ಲಿಯ ತರಬೇತಿ ಕೇಂದ್ರದಲ್ಲಿ ಮೂವರು ಐಎಎಸ್ ಆಕಾಂಕ್ಷಿಗಳು ಮೃತಪಟ್ಟ ಪ್ರಕರಣದ ತನಿಖೆಯನ್ನು ಸಿಬಿಐ ಕೈಗೆತ್ತಿಕೊಂಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಭಾರೀ ಮಳೆ ಸುರಿದ ಕಾರಣದಿಂದ ಹೊಸದಿಲ್ಲಿಯ ಹಳೆಯ ರಾಜಿಂದರ್ ನಗರ್ ನಲ್ಲಿರುವ ರಾವ್ಸ್ ಐಎಎಸ್ ಸ್ಟಡಿ ಸರ್ಕಲ್ನ ತಳ ಅಂತಸ್ತಿಗೆ ನೆರೆ ನೀರು ನುಗ್ಗಿ ಉತ್ತರಪ್ರದೇಶದ ಶ್ರೇಯಾ ಯಾದವ್ (25), ತೆಲಂಗಾಣದ ತನ್ಯಾ ಸೋನಿ (25) ಹಾಗೂ ಕೇರಳದ ನವೀನ್ ಡೆಲ್ವಿನ್ (24) ಮೃತಪಟ್ಟಿದ್ದರು.

ದಿಲ್ಲಿ ಉಚ್ಛ ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಈ ಪ್ರಕರಣವನ್ನು ಸಿಬಿಐ ದಿಲ್ಲಿ ಪೊಲೀಸರಿಂದ ಕೈಗೆತ್ತಿಕೊಂಡಿದೆ.

ವಿದ್ಯಾರ್ಥಿಗಳ ಸಾವಿನ ಕುರಿತಂತೆ ದಿಲ್ಲಿ ನ್ಯಾಯಾಲಯ ಪೊಲೀಸರು ಹಾಗೂ ಮುನ್ಸಿಪಲ್ ಕಾರ್ಪೋರೇಷನ್ ಅನ್ನು ತರಾಟೆಗೆ ತೆಗೆದುಕೊಂಡಿತ್ತು. ಅವರು ತಳ ಅಂತಸ್ತಿನಿಂದ ಹೊರಬರಲು ಯಾಕೆ ಸಾಧ್ಯವಾಗಿಲ್ಲ ಎಂಬುದು ಅರ್ಥ ಆಗುತ್ತಿಲ್ಲ ಎಂದು ಹೇಳಿತ್ತು.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News