×
Ad

ಪಾಕಿಸ್ತಾನದಿಂದ ಕದನವಿರಾಮ ಉಲ್ಲಂಘನೆ | ಸೇನೆಯಿಂದ ಕಟ್ಟೆಚ್ಚರ

Update: 2025-05-10 22:59 IST

ಸಾಂದರ್ಭಿಕ ಚಿತ್ರ | PC : PTI

ಹೊಸದಿಲ್ಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಸಂಘರ್ಷಕ್ಕೆ ವಿರಾಮ ಘೋಷಣೆಯ ನಂತರವೂ ಕಾಶ್ಮೀರದಲ್ಲಿ ಸ್ಫೋಟದ ಶಬ್ದ ಕೇಳಿಬಂದಿದೆ. ದಾಳಿ ಪ್ರಕರಣ ವರದಿಯಾಗುತ್ತಿದ್ದಂತೆ ಭಾರತೀಯ ಸೇನಾಪಡೆ ಕಟ್ಟೆಚ್ಚರ ವಹಿಸಿದೆ.

ಈ ಕುರಿತು ಸಾಮಾಜಿಕ ಮಾದ್ಯಮ ಎಕ್ಸ್‌ನಲ್ಲಿ ವಿಷಯ ಹಂಚಿಕೊಂಡಿರುವ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಉಮರ್ ಅಬ್ದುಲ್ಲಾ, ‘ಉಭಯ ರಾಷ್ಟ್ರಗಳು ಕದನ ವಿರಾಮ ಘೋಷಿಸಿದ ನಂತರವೂ ಸ್ಫೋಟದ ಶಬ್ದ ಕೇಳಿಸುತ್ತಿದೆ’ ಎಂದು ತಿಳಿಸಿದ್ದಾರೆ.

ಶನಿವಾರ ಸಂಜೆಯ ವೇಳೆಗೆ ಭಾರತ ಮತ್ತು ಪಾಕಿಸ್ತಾನದ ನಡುವೆ ಕದನವಿರಾಮ ಘೋಷಣೆಯಾಗಿತ್ತು. ಆದರೆ, ಪಾಕಿಸ್ತಾನವು ರಾತ್ರಿಯೇ ಜಮ್ಮುವಿನಲ್ಲಿ ಡ್ರೋನ್ ದಾಳಿ ನಡೆಸಿದೆ. ಇದರಿಂದ ರಾಜಸ್ಥಾನ, ಪಂಜಾಬ್, ಛತ್ತೀಸ್ಗಢದ ಗಡಿಯಲ್ಲೂ ಕಟ್ಟೆಚ್ಚರ ವಹಿಸಲಾಗಿದೆ. ಸಂಪೂರ್ಣ ಬ್ಲಾಕ್ಔಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ.

‘ಇದೆಂಥ ಅವಸ್ಥೆ. ಕದನ ವಿರಾಮ ಘೋಷಣೆಯಾಗಿದೆ. ಆದರೂ ಶ್ರೀನಗರದ ಸುತ್ತಮುತ್ತ ಸ್ಫೋಟದ ಶಬ್ದಗಳು ಮೊಳಗುತ್ತಲೇ ಇವೆ’ ಎಂದು ಸಿಎಂ ಉಮರ್ ಅಬ್ದುಲ್ಲಾ ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News