×
Ad

ಕದನ ವಿರಾಮ ಇರಲಿ, ಇಲ್ಲದಿರಲಿ, ಪಹಲ್ಗಾಮ್‌ ಉಗ್ರರನ್ನು ಶಿಕ್ಷಿಸಿ: ಸಂಸದ ಅಸದುದ್ದೀನ್ ಉವೈಸಿ

Update: 2025-05-11 11:51 IST

ಅಸದುದ್ದೀನ್ ಉವೈಸಿ (Photo: PTI)

ಹೈದರಾಬಾದ್‌: ‘ಕದಾನ ವಿರಾಮ ಇರಲಿ, ಇಲ್ಲದಿರಲಿ. ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದಿರುವವರನ್ನು ಭಾರತ ಸೆರೆ ಹಿಡಿಯಬೇಕು’ ಎಂದು ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಉವೈಸಿ ಹೇಳಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು "ತನ್ನ ಭೂಪ್ರದೇಶವನ್ನು ಪಾಕಿಸ್ತಾನವು ಭಾರತದ ವಿರುದ್ಧ ಭಯೋತ್ಪಾದನೆಗೆ ಬಳಸುವವರೆಗೆ ಶಾಶ್ವತ ಶಾಂತಿ ನೆಲೆಸಲು ಸಾಧ್ಯವಿಲ್ಲ" ಎಂದು ತಿಳಿಸಿದ್ದಾರೆ.

‘ನಮ್ಮ ಸಶಸ್ತ್ರ ಪಡೆಗಳಿಗೆ ನಾನು ಧನ್ಯವಾದ ತಿಳಿಸುತ್ತೇನೆ. ಭಯೋತ್ಪಾದಕ ದಾಳಿಯಲ್ಲಿ ಹುತಾತ್ಮರಾದ ಯೋಧ ಎಂ. ಮುರಳಿ ನಾಯಕ್, ಎಡಿಸಿಸಿ ರಾಜ್ ಕುಮಾರ್ ಥಾಪಾ ಅವರಿಗೆ ನನ್ನ ಸಂತಾಪಗಳು. ಸಂಘರ್ಷದಲ್ಲಿ ಮೃತಪಟ್ಟ ಮತ್ತು ಗಾಯಗೊಂಡ ಎಲ್ಲಾ ನಾಗರಿಕರಿಗಾಗಿ ನಾನು ಪ್ರಾರ್ಥಿಸುತ್ತೇನೆ’ ಎಂದು ಪೋಸ್ಟ್ ನಲ್ಲಿ ಹೇಳಿದ್ದಾರೆ.

ಕದನ ವಿರಾಮ ಘೋಷಣೆಯು ಗಡಿ ಪ್ರದೇಶಗಳಲ್ಲಿ ವಾಸಿಸುವ ಜನರಿಗೆ ನೆಮ್ಮದಿ ನೀಡಿದೆ ಎಂದು ನಾನು ಭಾವಿಸುತ್ತೇನೆ. ಭಯೋತ್ಪಾದಕರ ವಿರುದ್ಧದ ಈ ಹೋರಾಟದಲ್ಲಿ ಸರ್ಕಾರ ಮತ್ತು ಸಶಸ್ತ್ರ ಪಡೆಗಳಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದು ಹೈದರಾಬಾದ್ ಸಂಸದರೂ ಆಗಿರುವ ಅಸದುದ್ದೀನ್ ಉವೈಸಿ ಹೇಳಿದ್ದಾರೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News