×
Ad

ಆಂಧ್ರ ಮುಖ್ಯಮಂತ್ರಿಯಾಗಿ ಚಂದ್ರಬಾಬು ನಾಯ್ಡು ಪ್ರಮಾಣವಚನ ಜೂ. 12ಕ್ಕೆ ಮುಂದೂಡಿಕೆ?

Update: 2024-06-06 22:03 IST

ಚಂದ್ರಬಾಬು ನಾಯ್ಡು | PC : PTI 

ಅಮರಾವತಿ: ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿ ತೆಲುಗು ದೇಶಮ್ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡುರ ಪ್ರಮಾಣವಚನ ಸ್ವೀಕಾರ ಕಾರ್ಯಕ್ರಮವನ್ನು ಜೂನ್ 12ಕ್ಕೆ ಮುಂದೂಡಲಾಗಿದೆ ಎಂದು ಮೂಲಗಳು ತಿಳಿಸಿವೆ ಎಂದು ‘India Today’ ಗುರುವಾರ ವರದಿ ಮಾಡಿದೆ.

ಇದಕ್ಕೂ ಮೊದಲು ಅವರು ಜೂನ್ 9ರಂದು ಪ್ರಮಾಣವಚನ ಸ್ವೀಕರಿಸುತ್ತಾರೆಂದು ನಿರೀಕ್ಷಿಸಲಾಗಿತ್ತು.

ದೇಶದ ಪ್ರಧಾನಿಯಾಗಿ ನರೇಂದ್ರ ಮೋದಿ ಜೂನ್ 8ರಂದು ಪ್ರಮಾಣವಚನ ಸ್ವೀಕರಿಸುತ್ತಿರುವ ಹಿನ್ನೆಲೆಯಲ್ಲಿ, ಚಂದ್ರಬಾಬು ನಾಯ್ಡುರ ಪ್ರಮಾಣವಚನ ದಿನಾಂಕದಲ್ಲಿ ಬದಲಾವಣೆಯಾಗಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News