×
Ad

ಚಂದ್ರಬಾಬು ನಾಯ್ಡು ನಿರೀಕ್ಷಣಾ ಜಾಮೀನು ಪ್ರಶ್ನಿಸಿದ ಅರ್ಜಿ ತಿರಸ್ಕೃತ

Update: 2024-01-29 21:29 IST

ಎನ್. ಚಂದ್ರಬಾಬು ನಾಯ್ಡು | Photo ; PTI 

ಕೋಟಾ : ಅಮರಾವತಿ ಇನ್ನರ್ ರಿಂಗ್ ರೋಡ್ ಹಗರಣದ ಪ್ರಕರಣಕ್ಕೆ ಸಂಬಂಧಿಸಿ ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರಿಗೆ ನೀಡಿರುವ ನಿರೀಕ್ಷಣಾ ಜಾಮೀನು ಪ್ರಶ್ನಿಸಿ ಆಂಧ್ರಪ್ರದೇಶ ಸರಕಾರ ಸಲ್ಲಿಸಿದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ತಿರಸ್ಕರಿಸಿದೆ.

ಚಂದ್ರಬಾಬು ನಾಯ್ಡು ಅವರಿಗೆ ಉಚ್ಚ ನ್ಯಾಯಾಲಯ ಜನವರಿ 10ರಂದು ನಿರೀಕ್ಷಣಾ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ರಾಜ್ಯ ಸರಕಾರ ಸುಪ್ರೀಂ ಕೋರ್ಟ್ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಹಾಗೂ ದೀಪಂಕರ್ ದತ್ತಾ ಅವರನ್ನು ಒಳಗೊಂಡ ಪೀಠ ತಿರಸ್ಕರಿಸಿದೆ.

Tags:    

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Byline - ವಾರ್ತಾಭಾರತಿ

contributor

Similar News